ಪ್ರಪಾತಕ್ಕೆ ಉರುಳಿದ ಬಸ್: ಉಪನ್ಯಾಸಕರು ಸೇರಿ 33 ಮಂದಿ ದುರ್ಮರಣ
ಚಂದ್ರಗ್ರಹಣದ ಬೆನ್ನಲ್ಲೇ ಡಪೋಲಿ ಕೃಷಿ ವಿಶ್ವವಿದ್ಯಾಲಯದ ಉಪನ್ಯಾಸಕರು ಸೇರಿದಂತೆ 40 ಮಂದಿ ಪ್ರವಾಸಕ್ಕೆ ಹೊರಟ್ಟಿದ್ದ ಬಸ್ ಚಾಲಕನ ನಿಯಂತ್ರಣ...

Published On :
ರಾಯ್‌ಗಢ(ಮಹಾರಾಷ್ಟ್ರ): ಚಂದ್ರಗ್ರಹಣದ ಬೆನ್ನಲ್ಲೇ ಡಪೋಲಿ ಕೃಷಿ ವಿಶ್ವವಿದ್ಯಾಲಯದ ಉಪನ್ಯಾಸಕರು ಸೇರಿದಂತೆ 40 ಮಂದಿ ಪ್ರವಾಸಕ್ಕೆ ಹೊರಟ್ಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದಿದ್ದು ಪರಿಣಾಮ ಉಪನ್ಯಾಸಕರು ಸೇರಿದಂತೆ 33 ಮಂದಿ ದಾರುಣ ಸಾವನ್ನಪ್ಪಿದ್ದಾರೆ.
ಮಹಾರಾಷ್ಟ್ರದ ರಾಯಗಢದ ಅಂಬೆನಾಲಿ ಘಾಟ್ ಬಳಿ ಬಸ್ ಸುಮಾರು 500 ಅಡಿ ಆಳದ ಕಂದಕಕ್ಕೆ ಉರುಳಿದೆ. ಪರಿಣಾಮ ಸ್ಥಳದಲ್ಲೇ 33 ಮಂದಿ ಸಾವನ್ನಪ್ಪಿದ್ದು ಹಲವರಿಗೆ ಗಂಭೀರ ಗಾಯಗಳಾಗಿವೆ.
ಎನ್‌ಡಿಆರ್‌ಎಫ್ ತಂಡ ಘಟನಾ ಸ್ಥಳಕ್ಕೆ ತೆರಳಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬಸ್ ನಲ್ಲಿ 25 ಉಪನ್ಯಾಸಕರು ಸೇರಿದಂತೆ 40 ಮಂದಿ ಪ್ರಯಾಣಿಸುತ್ತಿದ್ದರು. ಇನ್ನು ಹಲವರು ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮಹಾರಾಷ್ಟ್ರMaharashtraಅಪಘಾತaccidentಕಂದಕಕ್ಕೆ ಉರುಳಿದ ಬಸ್Bus Fell DownMountainAmbenali GhatRaigadಅಂಬೆನಾಲೆ ಘಾಟ್ರಾಯ್ಗಢ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


