ದೇಶ

ಬಿಹಾರ: ನಿರಾಶ್ರಿತ ಶಿಬಿರದಲ್ಲಿದ್ದ 34 ಅಪ್ರಾಪ್ತೆಯರ ಮೇಲೆ ಅತ್ಯಾಚಾರ, ಪೋಲೀಸ್ ಹೇಳಿಕೆ

ಬಿಹಾರದ ಮುಜಫರ್ ಪುರ್ ಜಿಲ್ಲೆಯಲ್ಲಿನ ನಿರಾಶ್ರಿತರ ಶಿಬಿರದಲ್ಲಿದ್ದ 34 ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ನಡೆದಿದೆ ಎಂದು ಬಿಹಾರ ಪೋಲೀಸರು ತಿಳಿಸಿದ್ದಾರೆ.

ಬಿಹಾರ: ನಿರಾಶ್ರಿತ ಶಿಬಿರದಲ್ಲಿದ್ದ 34 ಅಪ್ರಾಪ್ತೆಯರ ಮೇಲೆ ಅತ್ಯಾಚಾರ, ಪೋಲೀಸ್ ಹೇಳಿಕೆ
ಸಾಂದರ್ಭಿಕ ಚಿತ್ರ
Published On :
ಪಾಟ್ನಾ: ಬಿಹಾರದ ಮುಜಫರ್ ಪುರ್ ಜಿಲ್ಲೆಯಲ್ಲಿನ ನಿರಾಶ್ರಿತರ ಶಿಬಿರದಲ್ಲಿದ್ದ  34 ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ನಡೆದಿದೆ ಎಂದು ಬಿಹಾರ ಪೋಲೀಸರು ತಿಳಿಸಿದ್ದಾರೆ. ಇದಕ್ಕೂ ಮುನ 29 ಮಂದಿಯ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾಗಿತ್ತು, ಆದರೆ ಇದೀಗ ಬಂದ ಮಾಹಿತಿಯಂತೆ 34 ಬಾಲಕಿಯರ ಮೇಲೆ ಅತ್ಯಾಚಾರವಾಗಿದೆ..
ಮುಜಾಫರ ಪುರ್ ನಿರಾಶ್ರಿತರ ಶಿಬಿರದ 34 ಹುಡುಗಿಯರು ಅತ್ಯಾಚಾರಕ್ಕೊಳಪಟ್ಟಿದ್ದಾರೆ ಎಂದು ಮುಜಫರ್ ಪುರ್ ಹಿರಿಯ ಪೊಲೀಸ್ ಸೂಪರಿಂಟೆಂಡೆಂಟ್ (ಎಸ್ಎಸ್ಪಿ) ಹರ್ಪ್ರೀತ್ ಕೌರ್ ಹೇಳಿದ್ದಾರೆ: 
ಕಳೆದ ವಾರ ನಿರಾಶ್ರಿತ ಶಿಬಿರದಲ್ಲಿದ್ದ 42 ಬಾಲಕಿಯರ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಅದರಲ್ಲಿ 29 ಮಂದಿ ಅತ್ಯಾಚಾರಕ್ಕೆ ಒಳಗಾಗಿರುವುದು ಬಹಿರಂಗವಾಗಿತ್ತು.
ಅಮಾನುಷ ಘಟನೆಯ ತನಿಖೆಗೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚ್ಚಿದ್ದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರ ಪ್ರಕರಣವನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದಾರೆ..

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.