ಇಮ್ರಾನ್ ಖಾನ್ 'ಸ್ನೇಹ'ದ ಆಹ್ವಾನ ಒಪ್ಪಿಕೊಳ್ಳಿ: ಪ್ರಧಾನಿ ಮೋದಿಗೆ ಮೆಹಬೂಬ ಮುಫ್ತಿ
ಪಾಕಿಸ್ತಾನದ ಮುಂದಿನ ಪ್ರಧಾನಿ, ಪಾಕಿಸ್ಥಾನ್ ತೆಹರೀಕ್ ಇ ಇನ್ಸಾಫ್(ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರು...

Published On :
ಶ್ರೀನಗರ: ಪಾಕಿಸ್ತಾನದ ಮುಂದಿನ ಪ್ರಧಾನಿ, ಪಾಕಿಸ್ಥಾನ್ ತೆಹರೀಕ್ ಇ ಇನ್ಸಾಫ್(ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರು ಭಾರತದತ್ತ ಸ್ನೇಹಹಸ್ತ ಚಾಚಿದ್ದು, ಅದನ್ನು ಒಪ್ಪಿಕೊಳ್ಳುವಂತೆ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.
ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ಪಿಟಿಐ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ ನಂತರ ಮೊದಲ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ್ದ ಇಮ್ರಾನ್ ಖಾನ್, "ಪಾಕಿಸ್ಥಾನ ಭಾರತದೊಂದಿಗಿನ ಸಂಬಂಧಗಳನ್ನು ಸುಧಾರಿಸಲು ಸಿದ್ಧವಿದೆ, ಕಾಶ್ಮೀರವೂ ಸೇರಿದಂತೆ ಎಲ್ಲ ವಿಷಯಗಳನ್ನು ಇತ್ಯರ್ಥ ಪಡಿಸುವುದಕ್ಕೆ ಉಭಯ ದೇಶಗಳ ನಾಯಕರು ಮಾತುಕತೆ ನಡೆಸುವ ಅಗತ್ಯವಿದೆ' ಎಂದು ಹೇಳಿದ್ದರು.
'ನಾನು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡುತ್ತಿದ್ದೇನೆ, ಪಾಕಿಸ್ತಾನದಲ್ಲಿ ಹೊಸ ಸರ್ಕಾರ ರಚನೆಯಾಗುತ್ತಿದ್ದು, ಅಲ್ಲಿನ ನೂತನ ಪ್ರಧಾನಿಗಳು ಭಾರತದೊಂದಿಗೆ ಮಾತುಕತೆಯ ಸ್ನೇಹಹಸ್ತ ಚಾಚಿದ್ದಾರೆ. ಅದಕ್ಕೆ ಮೋದಿಯವರು ಸಕಾರಾತ್ಮಕವಾಗಿ ಸ್ಪಂದಿಸಬೇಕು ' ಎಂದು ಮುಫ್ತಿ ಹೇಳಿದ್ದಾರೆ.
ಇಮ್ರಾನ್ ಖಾನ್ ಅವರ ಸ್ನೇಹ ಹಸ್ತವನ್ನು ಸ್ವೀಕರಿಸಬೇಕು ಎಂಬುದು ಮನವಿ ಎಂದು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.
ಪಾಕ್ ರಾಷ್ಟ್ರೀಯ ಅಸೆಂಬ್ಲಿ ಚುನಾವಣೆಗಳಯಲ್ಲಿ ಇಮ್ರಾನ್ ಖಾನ್ ಅವರ ಪಿಟಿಐ ಪಕ್ಷ ಅತೀ ದೊಡ್ಡ ಪಕ್ಷವಾಗಿ ಮೂಡಿ ಬಂದಿದ್ದು ಇಮ್ರಾನ್ ಅವರು ದೇಶದ ಪ್ರಧಾನಿಯಾಗುವುದು ಖಚಿತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


