ದೇಶ

ನೀವು ಯಾವತ್ತೂ ಕಣ್ಣು ಹೊಡೆದಿಲ್ಲವೇ?: ಪತ್ರಕರ್ತರಿಗೆ ಜ್ಯೋತಿರಾದಿತ್ಯ ಸಿಂಧಿಯಾ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಕಣ್ ಸನ್ನೆ ಮಾಡಿದ ವಿಚಾರ ಬಿಟ್ಟು, ರೈತರ ಆತ್ಮಹತ್ಯೆ....

ನೀವು ಯಾವತ್ತೂ ಕಣ್ಣು ಹೊಡೆದಿಲ್ಲವೇ?: ಪತ್ರಕರ್ತರಿಗೆ ಜ್ಯೋತಿರಾದಿತ್ಯ ಸಿಂಧಿಯಾ
ಜ್ಯೋತಿರಾದಿತ್ಯ ಸಿಂಧಿಯಾ
Published On :
ಇಂದೋರ್: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಕಣ್ ಸನ್ನೆ ಮಾಡಿದ ವಿಚಾರ ಬಿಟ್ಟು, ರೈತರ ಆತ್ಮಹತ್ಯೆ ಮತ್ತು ಅತ್ಯಾಚಾರ ಪ್ರಕರಣಗಳ ಬಗ್ಗೆ ಗಮನಹರಿಸುವಂತೆ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು ಶನಿವಾರ ಮಾಧ್ಯಮಗಳಿಗೆ ಸೂಚಿಸಿದ್ದಾರೆ.
ರಾಹುಲ್ ಗಾಂಧಿ ಕಣ್ ಸನ್ನೆ ಬಗ್ಗೆ ವರದಿಗಾರರ ಪ್ರಶ್ನೆಗೆ ಗರಂ ಆದ ಕಾಂಗ್ರೆಸ್ ನಾಯಕ, ಕಣ್ಣು ಹೊಡೆದದ್ದು ಒಂದು ದೊಡ್ಡ ವಿಚಾರವೇ? ನೀವು ಜೀವನದಲ್ಲಿ ಯಾವತ್ತೂ ಕಣ್ಣೆ ಹೊಡೆದಿಲ್ಲವೇ? ಎಂದು ಪತ್ರಕರ್ತರನ್ನು ಪ್ರಶ್ನಿಸಿದರು.
ದೇಶದಲ್ಲಿ ರೈತರ ಆತ್ಮಹತ್ಯೆ, ಮಹಿಳೆಯರ ಮೇಲೆ ಅತ್ಯಾಚಾರ, ದಲಿತರ ಮೇಲೆ ದಾಳಿ, ಬುಡಕಟ್ಟು ಜನರ ಭೂಮಿಯನ್ನು ಕಿತ್ತುಕೊಳ್ಳಲಾಗುತ್ತಿದೆ ಮತ್ತು ನಿರುದ್ಯೋಗ ಸಮಸ್ಯೆ ಹೆಚ್ಚಾಗಿತ್ತಿದೆ. ಇದರ ಬಗ್ಗೆ ಗಮನಹರಿಸಬೇಕಾದ ಪ್ರಜಾಪ್ರಭುತ್ವದ ನಾಲ್ಕನೆ ಅಂಗ ಕಣ್ ಸನ್ನೆ ಬಗ್ಗೆ ಹೆಚ್ಚು ಗಮನ ಹರಿಸುತ್ತಿದೆ ಎಂದರು.
ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿಂಧಿಯಾ, ಇತ್ತೀಚಿಗೆ ಭತ್ತ ಮತ್ತು ಇತರೆ ಬೆಳೆಗಳ ಬೆಂಬಲ ಬೆಲೆ ಹೆಚ್ಚಿಸಿರುವುದು ಕೇವಲ ಚುನಾವಣಾ ಗಿಮಿಕ್ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.