ದೇಶ

ಜಮ್ಮು-ಕಾಶ್ಮೀರ: ಉಗ್ರರಿಂದ ಮತ್ತೊಬ್ಬ ಪೊಲೀಸ್ ಅಧಿಕಾರಿಯ ಅಪಹರಣ

ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರನ್ನು ಗುರಿ ಮಾಡಿಕೊಳ್ಳುತ್ತಿರುವ ಉಗ್ರರು, ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು ಅಪಹರಿಸಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಶನಿವಾರ ನಡೆದಿದೆ...

ಜಮ್ಮು-ಕಾಶ್ಮೀರ: ಉಗ್ರರಿಂದ ಮತ್ತೊಬ್ಬ ಪೊಲೀಸ್ ಅಧಿಕಾರಿಯ ಅಪಹರಣ
ಸಂಗ್ರಹ ಚಿತ್ರ
Published On :
ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರನ್ನು ಗುರಿ ಮಾಡಿಕೊಳ್ಳುತ್ತಿರುವ ಉಗ್ರರು, ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು ಅಪಹರಿಸಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. 
ಶಕೀಲ್ ಅಹ್ಮದ್ ಲೋನೆ ಅಪಹರಣಕ್ಕೊಳಗಾಗಿರುವ ಪೊಲೀಸ್ ಅಧಿಕಾರಿಯಾಗಿದ್ದಾರೆ. ಶಕೀಲ್ ಅವರು ಜಮ್ಮು ಮತ್ತು ಕಾಶ್ಮೀರದ ವಿಶೇಷ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ. 
ಪುಲ್ವಾಮ ಜಿಲ್ಲೆಯ ಛಾನ್ ಕಿತರ್ ತ್ರಾಲ್ ಎಂಬಲ್ಲಿ ಕಳೆದ ರಾತ್ರಿ ಉಗ್ರರು ಅಪಹರಿಸಿದ್ದಾರೆಂದು ಹೇಳಲಾಗುತ್ತಿದೆ. 
ಅಧಿಕಾರಿಯ ಪತ್ತೆಗಾಗಿ ಪೊಲೀಸರು ಇದೀಗ ಅನೇಕ ತಂಡಗಳನ್ನು ರಚನೆ ಮಾಡಿದ್ದು, ತೀವ್ರ ಹುಡುಕಾಟ ನಡೆಸುದ್ದಾರೆ. 
ಅಧಿಕಾರಿ ಅಪಹರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಎಸ್'ಪಿ ವೈದ್ ಅವರು, ಮಾಹಿತಿಯನ್ನು ಪರಿಶೀಲನೆ ನಡೆಸಲಾಗುತ್ತಿದೆ. ಸಂಬಂಧಿಕರೊಬ್ಬರನ್ನು ಭೇಟಿ ಮಾಡುವ ಸಲುವಾಗಿ ಶಕೀಲ್ ಹೋಗಿದ್ದರು ಎಂದು ಕುಟುಂಬಸ್ಥರು ಹೇಳಿದ್ದಾರೆಂದು ತಿಳಿಸಿದ್ದಾರೆ. 
ವಾರಗಳ ಹಿಂದಷ್ಟೇ ಪೊಲೀಸ್ ಪೇದೆಯೊಬ್ಬರನ್ನು ಉಗ್ರರು ಅಪಹರಿಸಿದ್ದರು. ನಂತರ ಗುಂಡು ಹಾರಿಸಿ ಹತ್ಯೆ ಮಾಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.