ದೇಶ

ಕಾಂಗ್ರೆಸ್ ಇಲ್ಲದೆ ಪ್ರತಿಪಕ್ಷಗಳ ಕೂಟ ಯಶಸ್ವಿಯಾಗಲ್ಲ: ಒಮರ್ ಅಬ್ದುಲ್ಲಾ

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಎಲ್ಲಾ ಪ್ರಾದೇಶಿಕ ಪಕ್ಷಗಳು ಒಂದಾಗಬೇಕು...

ಕಾಂಗ್ರೆಸ್ ಇಲ್ಲದೆ ಪ್ರತಿಪಕ್ಷಗಳ ಕೂಟ ಯಶಸ್ವಿಯಾಗಲ್ಲ: ಒಮರ್ ಅಬ್ದುಲ್ಲಾ
ಒಮರ್ ಅಬ್ದುಲ್ಲಾ
Published On :
ಕೋಲ್ಕತಾ: 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಎಲ್ಲಾ ಪ್ರಾದೇಶಿಕ ಪಕ್ಷಗಳು ಒಂದಾಗಬೇಕು ಎಂದು ನ್ಯಾಷನಲ್ ಕಾನ್ಫೆರೆನ್ಸ್(ಎನ್ ಸಿ) ನಾಯಕ ಒಮರ್ ಅಬ್ದುಲ್ಲಾ ಅವರು ಶನಿವಾರ ಕರೆ ನೀಡಿದ್ದಾರೆ.
ಇಂದು ಕೋಲ್ಕತಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ, ಕಾಂಗ್ರೆಸ್ ಇಲ್ಲದೆಯೇ ಪ್ರತಿಪಕ್ಷಗಳ ಕೂಟ ಯಶಸ್ವಿಯಾಗುವುದಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ, ಬಿಜೆಪಿ ವಿರುದ್ಧ ಪ್ರತಿಪಕ್ಷಗಳನ್ನು ಒಂದುಗೂಡಿಸುವ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಪ್ರಯತ್ನವನ್ನು ಶ್ಲಾಘಿಸಿದ ಒಮರ್ ಅಬ್ದುಲ್ಲಾ, ಪ್ರತಿಪಕ್ಷಗಳ ಮೈತ್ರಿಕೂಟದ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಸಂಬಂಧ ಸೋನಿಯಾ ಗಾಂಧಿ ಅವರು ಪ್ರಾದೇಶಿಕ ಪಕ್ಷಗಳೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಪ್ರತಿಪಕ್ಷಗಳನ್ನು ಒಟ್ಟುಗೂಡಿಸಲು ಸೋನಿಯಾ ಸಾಕಷ್ಟು ಯತ್ನಿಸುತ್ತಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಪ್ರತಿಪಕ್ಷಗಳು ಒಂದಾಗುವ ವಿಶ್ವಾಸವಿದೆ ಎಂದರು.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು 'ಒಕ್ಕೂಟ ರಂಗ' ಪ್ರಸ್ತಾವದ ಬಗ್ಗೆಯೂ ಪ್ರತಿಪಕ್ಷಗಳು ಚರ್ಚಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.
ನಿನ್ನೆಯಷ್ಟೇ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದ್ದ ಒಮರ್ ಅಬ್ದುಲ್ಲಾ ಅವರು, ದೇಶದ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.