2014-16 ರ ಅವಧಿಯಲ್ಲಿ ಎಸ್ ಸಿ, ಎಸ್ ಟಿ ಕಾಯ್ದೆಯಡಿಯಲ್ಲಿ ಕೇವಲ ಶೇ.27 ರಷ್ಟು ಮಂದಿಗೆ ಶಿಕ್ಷೆ
ಎಫ್ ಐ ಆರ್ ದಾಖಲಾತಿಯಲ್ಲಿ ವಿಳಂಬ, ಸಾಕ್ಷ್ಯಾಧಾರಗಳ ಕೊರತೆ ಮತ್ತಿತರ ಕಾರಣಗಳಿಂದಾಗಿ 2014-16ರ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಾಯ್ದೆಯಲ್ಲಿ ದಾಖಲಾದ ಪ್ರಕರಣಗಳಲ್ಲಿ ಶೇ. 27 ರಷ್ಟು ಮಂದಿಗೆ ಮಾತ್ರ ಶಿಕ್ಷೆಯಾಗಿದೆ.

ನವದೆಹಲಿ: ಎಫ್ ಐ ಆರ್ ದಾಖಲಾತಿಯಲ್ಲಿ ವಿಳಂಬ, ಸಾಕ್ಷ್ಯಾಧಾರಗಳ ಕೊರತೆ ಮತ್ತಿತರ ಕಾರಣಗಳಿಂದಾಗಿ 2014-16ರ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಾಯ್ದೆಯಲ್ಲಿ ದಾಖಲಾದ ಪ್ರಕರಣಗಳಲ್ಲಿ ಶೇ. 27 ರಷ್ಟು ಮಂದಿಗೆ ಮಾತ್ರ ಶಿಕ್ಷೆಯಾಗಿದೆ.
ಪರಿಶಿಷ್ಟ ಜಾತಿ, ಪಂಗಡದ ಮೇಲಿನ ಅಪರಾಧಕ್ಕಾಗಿ ದೇಶದಲ್ಲಿ 195 ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಆದರೆ, ಶಿಕ್ಷೆಗೊಳಗಾಗುತ್ತಿರುವ ಪ್ರಮಾಣ ಕಡಿಮೆಯಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಮಾಹಿತಿ ನೀಡಿದೆ.
2016ರಲ್ಲಿ ಈ ಕಾಯ್ದೆಯಡಿ ಒಟ್ಟು 40, 718 ಪ್ರಕರಣಗಳು ದಾಖಲಾಗಿದ್ದು, 30, 966 ಪ್ರಕರಣಗಳಲ್ಲಿ ಚಾರ್ಜ್ ಶೀಟ್ ದಾಖಲಿಸಲಾಗಿದೆ. ಆದರೆ, ಶಿಕ್ಷೆಗೊಳಗಾದವರ ಸಂಖ್ಯೆ ಶೇ. 25.8 ರಷ್ಟಾಗಿದೆ ಎಂದು ಗೃಹ ಇಲಾಖೆ ಹೇಳಿಕೆ ನೀಡಿದೆ.
2015ರ ಅವಧಿಯಲ್ಲಿ 38, 510 ಪ್ರಕರಣಗಳು ದಾಖಲಾಗಿದ್ದು, 26, 922 ಚಾರ್ಜ್ ಶೀಟ್ ದಾಖಲಿಸಲಾಗಿದೆ. ಆದರೆ, ಶೇ, 27. 2 ರಷ್ಟು ಮಂದಿಗೆ ಶಿಕ್ಷೆ ಆಗಿದೆ. 2014ರಲ್ಲಿ 40, 208 ಪ್ರಕರಣಗಳು ದಾಖಲಾಗಿದ್ದು, 29, 248 ಪ್ರಕರಣಗಳಲ್ಲಿ ಚಾರ್ಜ್ ಶೀಟ್ ದಾಖಲಿಸಲಾಗಿದೆ. ಶೇ.28.4 ರಷ್ಟಿಗೆ ಮಂದಿಗೆ ಮಾತ್ರ ಶಿಕ್ಷೆಯಾಗಿದೆ. 2017ರ ಮಾಹಿತಿ ಇನ್ನೂ ತಿಳಿದುಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


