ಡಿಎಂಕೆ ಅಧಿನಾಯಕ ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ: ಸಿಎಂ ಪಳನಿಸ್ವಾಮಿ
ಡಿಎಂಕೆ ಪಕ್ಷದ ಅಧಿನಾಯಕ ಎಂ ಕರುಣಾನಿಧಿ ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಮಿಳುನಾಡು ಸಿಎಂ ಇ ಪಳನಿಸ್ವಾಮಿ ಹೇಳಿದ್ದಾರೆ.

Published On :
ಚೆನ್ನೈ: ಡಿಎಂಕೆ ಪಕ್ಷದ ಅಧಿನಾಯಕ ಎಂ ಕರುಣಾನಿಧಿ ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಮಿಳುನಾಡು ಸಿಎಂ ಇ ಪಳನಿಸ್ವಾಮಿ ಹೇಳಿದ್ದಾರೆ.
ಇಂದು ಬೆಳಗ್ಗೆ ಕಾವೇರಿ ಆಸ್ಪತ್ಪೆಗೆ ಭೇಟಿ ನೀಡಿದ ಪಳನಿಸ್ವಾಮಿ ಅವರು ಪರಿಶೀಲನೆ ನಡೆಸಿದರು. ಈ ವೇಳೆ ಆಸ್ಪತ್ರೆ ವೈದ್ಯಾಧಿಕಾರಿಗಳು ಮತ್ತು ಕರುಣಾನಿಧಿ ಸಂಬಂಧಿಕರೊಂದಿಗೆ ಮಾತನಾಡಿದ ಅವರು ಮಾಹಿತಿ ಪಡೆದುಕೊಂಡರು. ಬಳಿಕ ಹೊರಗೆ ಬಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಈಗಷ್ಟೇ ಕಾವೇರಿ ಆಸ್ಪತ್ರೆ ವೈದ್ಯಾದಿಕಾರಿಗಳ ಜೊತೆ ಮಾತನಾಡಿದೆ. ಕರುಣಾನಿಧಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಕಳೆದ ರಾತ್ರಿಗಿಂತಲೂ ಈಗ ಅವರ ಆರೋಗ್ಯ ಉತ್ತಮವಾಗಿದೆ. ಅವರು ಶೀಘ್ರ ಗುಣಮುಖರಾಗುವ ವಿಶ್ವಾಸವಿದೆ ಎಂದು ಹೇಳಿದರು.
ಅಂತೆಯೇ ಕರುಣಾನಿಧಿ ಅವರ ಆರೋಗ್ಯ ಮೇಲ್ವಿಚಾರಣೆಯನ್ನು ಸರ್ಕಾರವೇ ನೋಡಿಕೊಳ್ಳಲ್ಲಿದೆ ಎಂದು ಭರವಸೆ ನೀಡಿದರು.
ಇದೇ ವೇಳೆ ಉಪಸ್ಥಿತರಿದ್ದ ಎಐಎಡಿಎಂಕೆ ಮುಖಂಡರು ಕರುಣಾನಿಧಿ ಅವರನ್ನು ಹೊಗಳಿದರು. ಕರುಣಾನಿಧಿ ಅವರು ತಮಿಳು ಜನರ ನಾಯಕರು ಎಂದು ಹೇಳಿದರು,. ಅಂತೆಯೇ ಅವರ ಆರೋಗ್ಯ ಸ್ಥಿರವಾಗಿದ್ದು, ಶೀಘ್ರ ಮನೆಗೆ ವಾಪಸ್ ಆಗಲಿದ್ದಾರೆ ಎಂದು ಹೇಳಿದರು.
ಇನ್ನು 95 ವರ್ಷದ ಕರುಣಾನಿಧಿ ಅವರು ಅನಾರೋಗ್ಯಕ್ಕೀಡಾಗಿ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
tamilnaduತಮಿಳುನಾಡುDMKChennaiಚೆನ್ನೈಡಿಎಂಕೆM KarunanidhiKauvery Hospitalಕಾವೇರಿ ಆಸ್ಪತ್ರೆಎಂ ಕರುಣಾನಿಧಿಸಿಎಂ ಪಳನಿ ಸ್ವಾಮಿCM E Palaniswami
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


