ದೇಶ

ಹಿಂಸಾಚಾರಕ್ಕೆ ತಿರುಗಿದ ಮರಾಠ ಮೀಸಲಾತಿ ಹೋರಾಟ, ಓರ್ವ ಆತ್ಮಹತ್ಯೆ, ನಿಷೇಧಾಜ್ಞೆ ಜಾರಿ

ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ಮರಾಠ ಸಮುದಾಯ ನಡೆಸುತ್ತಿರುವ ಪ್ರತಿಭಟನೆ ಚಕನ್ ...

ಹಿಂಸಾಚಾರಕ್ಕೆ ತಿರುಗಿದ ಮರಾಠ ಮೀಸಲಾತಿ ಹೋರಾಟ, ಓರ್ವ ಆತ್ಮಹತ್ಯೆ, ನಿಷೇಧಾಜ್ಞೆ ಜಾರಿ
ಖಾಸಗಿ ವಾಹನಗಳಿಗೆ ಬೆಂಕಿ ಹಚ್ಚಿರುವುದು
Published On :
ಪುಣೆ: ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ಮರಾಠ ಸಮುದಾಯ ನಡೆಸುತ್ತಿರುವ ಪ್ರತಿಭಟನೆ ಚಕನ್ ಪಟ್ಟಣದಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಮಹಾರಾಷ್ಟ್ರ ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಪ್ರತಿಭಟನಾನಿರತ 35 ವರ್ಷದ ವ್ಯಕ್ತಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ನಂತರ ಚಕನ್ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಲ್ಲು ತೂರಾಟ, ಹಲವು ಸರ್ಕಾರಿ ಬಸ್ ಮತ್ತು ಖಾಸಗಿ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ಯಪಡಿಸಿದ್ದಾರೆ.
ಕಲ್ಲು ತೂರಾಟದಲ್ಲಿ ಕೆಲವು ಪೊಲೀಸರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪ್ರಮೋದ್ ಜೈಸಿಂಗ್ ಹೊರೆ ಅವರು ಮರಾಠ ಮೀಸಲಾತಿ ಬೇಡಿಕೆ ಬೆಂಬಲಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿನ್ನೆಯೇ ತಮ್ಮ ಫೇಸ್ ಬುಕ್ ಮತ್ತು ವಾಟ್ಸ್ ಆಪ್ ನಲ್ಲಿ ಸಂದೇಶ ಹಾಕಿದ್ದರು ಎಂದು ಮುಕುಂದವಾಡಿ ಪೊಲೀಸ್ ಠಾಣೆಯ ಹಿರಿಯ ಇನ್ಸ್ ಪೆಕ್ಟರ್ ನಾಥ ಜಾಧವ್ ಅವರು ಪಿಟಿಐಗೆ ತಿಳಿಸಿದ್ದಾರೆ.
ಮೀಸಲಾತಿಗೆ ಒತ್ತಾಯಿಸಿ ಕೆಲವು ಮರಾಠ ಸಂಘಟನೆಗಳು ಇಂದು ಚಕನ್ ಬಂದ್ ಗೆ ಕರೆ ನೀಡಿದ್ದವು.
ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.