ಎನ್ಆರ್'ಸಿ ಕಾರ್ಯ ನಡೆಸುತ್ತಿರುವುದು 'ಸುಪ್ರೀಂ' ನಿಗಾದಲ್ಲಿ, ಸರ್ಕಾರದ ಯಾವ ಪಾತ್ರವಿಲ್ಲ: ಲೋಕಸಭೆಯಲ್ಲಿ ಗೃಹ ಸಚಿವ
ಎನ್ಆರ್ಸಿ (ನಾಗರಿಕರ ರಾಷ್ಟ್ರೀಯ ನೋಂದಣಿ) ಕರಡು ಕುರಿತ ಕಾರ್ಯಗಳು ನಡೆಯುತ್ತಿರುವುದು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ, ಇದರಲ್ಲಿ ಸರ್ಕಾರದ ಯಾವ ಪಾತ್ರವೂ ಇಲ್ಲ ಎಂದು ಲೋಕಸಭೆಯಲ್ಲಿ...

Published On :
ನವದೆಹಲಿ: ಎನ್ಆರ್ಸಿ (ನಾಗರಿಕರ ರಾಷ್ಟ್ರೀಯ ನೋಂದಣಿ) ಕರಡು ಕುರಿತ ಕಾರ್ಯಗಳು ನಡೆಯುತ್ತಿರುವುದು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ, ಇದರಲ್ಲಿ ಸರ್ಕಾರದ ಯಾವ ಪಾತ್ರವೂ ಇಲ್ಲ ಎಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.
ಎನ್ಆರ್ಸಿ ಕರಡು ಕುರಿತಂತೆ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರದ ವಿರುದ್ಧ ಟಿಎಂಸಿ ಸೇರಿದಂತೆ ಇನ್ನಿತರೆ ಪಕ್ಷಗಳು ತೀವ್ರವಾಗಿ ಕಿಡಿಕಾರುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರಾಜನಾಥ್ ಸಿಂಗ್ ಅವರು, ಕರಡು ಕುರಿತ ಕಾರ್ಯದಲ್ಲಿ ಕೇಂದ್ರ ಸರ್ಕಾರದ ಯಾವ ಪಾತ್ರವೂ ಇಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ.
ಎನ್ಆರ್'ಸಿ ಕರಡು ಕುರಿತಂತೆ ಸರ್ಕಾರದ ವಿರುದ್ಧ ಕಿಡಿಕಾರುತ್ತಿರುವ ವಿಪಕ್ಷಗಳನ್ನು ಒಂದು ಪ್ರಶ್ನೆ ಕೇಳಲು ಇಚ್ಛಿಸುತ್ತೇನೆ, ಎನ್'ಆರ್'ಸಿ ಕರಡಿನಲ್ಲಿ ಕೇಂದ್ರದ ಪಾತ್ರವೇನಿದೆ? ಎನ್'ಆರ್'ಸಿ ಕುರಿತ ಕಾರ್ಯಗಳು ನಡೆಸುತ್ತಿರುವುದು ಸುಪ್ರೀಂಕೋರ್ಟ್ ನಿಗಾದಲ್ಲಿ. ಇದೊಂದು ಸೂಕ್ಷ್ಮ ವಿಚಾರವಾಗಿದ್ದು, ಈ ವಿಚಾರದಲ್ಲಿ ಯಾವುದೇ ಪಕ್ಷಗಳೂ ರಾಜಕೀಯ ಮಾಡಬಾರದು ಎಂದು ಹೇಳಿದ್ದಾರೆ.
ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿವೆ. ಇದೇನು ಅಂತಿಮ ಪಟ್ಟಿಯಲ್ಲ. ಕರಡು ಕುರಿತಂತೆ ಪ್ರತಿಕ್ರಿಯೆ ಹಾಗೂ ವಿರೋಧ ವ್ಯಕ್ತಪಡಿಸಲೂ ಅವಕಾಶವಿದೆ. ಹೀಗಾಗಿ ಯಾರೂ ಭೀತಿಗೊಳಗಾಗಬಾರದು ಎಂದಿದ್ದಾರೆ.
ರಾಷ್ಟ್ರೀಯ ನಾಗರಿಕ ನೋಂದಣಿಯು ಇಡೀ ದೇಶಕ್ಕೆ ಸಂಬಂಧಿಸಿದ್ದು, ಇಡೀ ದೇಶದ ನಾಗರೀಕರ ಹೆಸರು ಇದರಲ್ಲಿರುತ್ತದೆ. ಆದರೆ, ಅಸ್ಸಾಂನಲ್ಲಿ ಅಕ್ರಮ ಬಾಂಗ್ಲಾದೇಶೀಯರ ಹಾವಳಿ ಅಧಿಕವಾಗಿರುವ ಕಾರಣ ಹಾಗೂ ಈ ವಿಷಯಕ್ಕೆ ಸಂಬಂಧಿಸಿದಂತೆ ಪದೇ ಪದೇ ಹಿಂಸಾಚಾರ ನಡೆಯುತ್ತಿರುವ ಕಾರಣ ಸುಪ್ರೀಂಕೋರ್ಟ್ ನಿಗಾದಲ್ಲಿ ಅಸ್ಸಾಂ ಸರ್ಕಾರ ರಾಜ್ಯದ ನಾಗರೀಕರ ಪ್ರತ್ಯೇಕ ನೋಂದಣಿ ಕೈಗೊಳ್ಳುತ್ತಿದೆ.
ಅಸ್ಸಾಂ ರಾಜ್ಯದಲ್ಲಿ ಮೊದಲ ಕರಡು ಜ.1 ರಂದು ಬಿಡುಗಡೆಯಾಗಿತ್ತು. ಆಗ 3.29 ಕೋಟಿ ಅರ್ಜಿದಾರರಲ್ಲಿ 1.9 ಕೋಟಿ ಜನರ ಹೆಸರನ್ನು ಸೇರ್ಪಡೆಗೊಳಿಸಲಾಗಿತ್ತು. ಉಳಿದ 2 ಕೋಟಿ ಜನರ ಹಣೆಬರಹ ಇದೀಗ ತೀರ್ಮಾನವಾಗಲಿದೆ. ಹೀಗಾಗಿ ಅಕ್ರಮ ಬಾಂಗ್ಲಾದೇಶೀ ವಲಸಿಗರಿಗೆ ಇದು ಬಿಸಿಮುಟ್ಟಿಸುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.
ಅಸ್ಸಾಂ ನಾಗರಿಕರ ನೋಂದಣಿಯಲ್ಲಿ ಹೆಸರು ಇರದೇ ಹೋದವರನ್ನು ಅವರವರ ದೇಶಕ್ಕೆ ಗಡೀಪಾರು ಮಾಡುವ ಸಾಧ್ಯತೆಗಳಿವೆ. ಅಸ್ಸಾಂನಲ್ಲಿ ನೇಪಾಳಿಗರು ಹಾಗೂ ಬಾಂಗ್ಲಾ ವಲಸಿಗರು ಇದ್ದು, ಇವರ ಮೂಲಗಳನ್ನು ಆಧರಿಸಿ ಆಯಾ ದೇಶಗಳಿಗೆ ಗಡೀಪಾರು ಮಾಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳುತ್ತದೆ. ಆದರೆ, ಇದಕ್ಕೂ ಮುನ್ನ ಆ ದೇಶಗಳ ಜೊತೆಗೆ ಗಡೀಪಾರು ಒಪ್ಪಂದ ಮಾಡಿಕೊಂಡಿರಬೇಕಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ರಾಜನಾಥ್ ಸಿಂಗ್indiaAssamಅಸ್ಸಾಂRajnath Singhಬಾಂಗ್ಲಾದೇಶBangladeshIllegal immigrantsNRC issueಎನ್ ಆರ್ ಸಿ ವಿವಾದ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


