ಅಕ್ರಮ ಟೆಲಿಫೋನ್ ಎಕ್ಸ್ ಚೆಂಜ್ ಪ್ರಕರಣದಲ್ಲಿ ವಿಚಾರಣೆ ಎದುರಿಸಿ: ದಯಾನಿಧಿ ಮಾರನ್ ಗೆ ಸುಪ್ರೀಂ ಆದೇಶ
ಕೇಂದ್ರದ ಮಾಜಿ ಟೆಲಿಕಾಂ ಸಚಿವ ದಯಾನಿಧಿ ಮಾರನ್ ತನ್ನ ಸಹೋದರ ಕಲಾನಿಧಿ ಮಾರನ್ ಸನ್ ಟಿವಿ ನೆಟ್ ವರ್ಕ್ ಗೆ ಲಾಭವಾಗಲು "ಕಾನೂನುಬಾಹಿರ" ಟೆಲಿಫೋನ್ ಎಕ್ಸ್ ಚೇಂಜ್ ಗಳ ಸ್ಥಾಪನೆಗೆ ಸಂಬಂಧಿಸಿ....

Published On :
ನವದೆಹಲಿ: ಕೇಂದ್ರದ ಮಾಜಿ ಟೆಲಿಕಾಂ ಸಚಿವ ದಯಾನಿಧಿ ಮಾರನ್ ತನ್ನ ಸಹೋದರ ಕಲಾನಿಧಿ ಮಾರನ್ ಸನ್ ಟಿವಿ ನೆಟ್ ವರ್ಕ್ ಗೆ ಲಾಭವಾಗಲು "ಕಾನೂನುಬಾಹಿರ" ಟೆಲಿಫೋನ್ ಎಕ್ಸ್ ಚೇಂಜ್ ಗಳ ಸ್ಥಾಪನೆಗೆ ಸಂಬಂಧಿಸಿ ವಿಚಾರಣೆ ಎದುರಿಸಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಮದ್ರಾಸ್ ಹೈಕೋರ್ಟ್ ಅರ್ಜಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮಾರನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಇದಕ್ಕೂ ಮುನ್ನ ಜುಲೈ 25ರಂದುಮದ್ರಾಸ್ ಹೈಕೋರ್ಟ್ ಸಿಬಿಐ ನ್ಯಾಯಾಲಯ ಆದೇಶದ ಮೇರೆಗೆ ವಿಚಾರಣೆ ನಡೆಸುವಂತೆ ಆದೇಶ ನೀಡಿ ತೀರ್ಪಿತ್ತಿತ್ತು.
ನ್ಯಾಯಮೂರ್ತಿಗಳಾದ ರಂಜನ್ ಗೊಗೊಯ್, ಆರ್. ಬಾನುಮತಿ ಮತ್ತು ನವೀನ್ ಸಿನ್ಹಾ ಅವರನ್ನೊಳಗೊಂಡ ಪೀಠವು ಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಮತ್ತು ಎಲ್ಲಾ ಆರೋಪಗಳನ್ನು ವಿಚಾರಣೆ ವೇಳೆ ಪರಿಶೀಲಿಸಲಾಗುತ್ತದೆ ಎಂದಿದೆ.
ಯುಪಿಎ - 1 ಸರ್ಕಾರದ ಅವಧಿಯಲ್ಲಿ ಮಾಹಿತಿ ಮತ್ತು ಸಂಪರ್ಕ ಸಚಿವರಾಗಿದ್ದ ಡಿಎಂಕೆ ಸಂಸದ ದಯಾನಿಧಿ ಮಾರನ್ ತಾವು ಚೆನ್ನೈ ನಲ್ಲಿರುವ ತಮ್ಮ ಖಾಸಗಿ ಗೃಹಗಳಲ್ಲಿ ಅನಧಿಕೃತ ಟೆಲಿಫೋನ್ ಎಕ್ಸ್ ಚೇಂಜ್ ಗಳನ್ನು ಅಳವಡಿಸಿಕೊಂಡಿದ್ದಾರೆ ಎಂದು ಸಿಬಿಐ ಆರೋಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್Kalanithi MaranIllegal telephone exchange caseDayanidhi Maranದಯಾನಿಧಿ ಮಾರನ್ಕಲಾನಿಥಿ ಮಾರನ್ಅಕ್ರಮ ಟೆಲಿಫೋನ್ ಎಕ್ಸ್ಚೇಂಜ್ ಕೇಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


