ಕರುಣಾನಿಧಿ ಗಟ್ಟಿ ಮನಸಿನ ವ್ಯಕ್ತಿ: ಡಿಎಂಕೆ ಮುಖ್ಯಸ್ಥನ ಭೇಟಿ ಬಳಿಕ ರಾಹುಲ್
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿಎಂಕೆ ಮುಖ್ಯಸ್ಥ ....

Published On :
ಚೆನ್ನೈ: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.
ಕರುಣಾನಿಧಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್, ಮಾಜಿ ಸಿಎಂ ಕರುಣಾನಿಧಿ ಅವರ ಆರೋಗ್ಯ ಸ್ಥಿರವಾಗಿದೆ. ಅವರು ಚೆನ್ನಾಗಿದ್ದಾರೆ. ತಮಿಳು ನಾಡಿನ ಜನರಂತೆ ಅವರೂ ಒಬ್ಬ ಗಟ್ಟಿ ಮನಸಿನ ವ್ಯಕ್ತಿ. ತಮಿಳು ನಾಡಿನ ಸ್ಪೂರ್ತಿಯನ್ನೇ ಅವರು ತಮ್ಮಲ್ಲಿ ಆವಾಹಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಅವರೊಂದಿಗೆ ಕಾಂಗ್ರೆಸ್ ಸುದೀರ್ಘಕಾಲದಿಂದ ಸಂಬಂಧ ಹೊಂದಿದೆ ಎಂದು ರಾಹುಲ್ ತಿಳಿಸಿದ್ದಾರೆ.
ಕರುಣಾನಿಧಿ ಜತೆಗೆ ಸುಮಾರು 15 ನಿಮಿಷಗಳನ್ನು ಕಳೆದ ರಾಹುಲ್ ಗಾಂಧಿ, ತನ್ನ ತಾಯಿ ಸೋನಿಯಾ ಗಾಂಧಿ ಅವರು ಕರುಣಾನಿಧಿ ಮತ್ತು ಅವರ ಕುಟುಂಬದವರಿಗೆ ಶುಭ ಹಾರೈಕೆಗಳನ್ನು ನನ್ನ ಜೊತೆ ಕಳುಹಿಸಿದ್ದಾರೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


