ಗುರುಗ್ರಾಮ: ಪತ್ನಿ ಜತೆ ಜಗಳವಾಡಿ ಫೇಸ್ಬುಕ್ ಲೈವ್ ನಲ್ಲಿ ನೇಣಿಗೆ ಶರಣಾದ!
28 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಜೊತೆ ಜಗಳವಾಡಿ, ಬಳಿಕ ತನ್ನ ನಿವಾಸದಲ್ಲಿ ನೇಣಿಗೆ ಶರಣಾಗಿದ್ದು, ಕೊನೆ ಕ್ಷಣಗಳನ್ನು...

Published On :
ಗುರುಗ್ರಾಮ: 28 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಜೊತೆ ಜಗಳವಾಡಿ, ಬಳಿಕ ತನ್ನ ನಿವಾಸದಲ್ಲಿ ನೇಣಿಗೆ ಶರಣಾಗಿದ್ದು, ಕೊನೆ ಕ್ಷಣಗಳನ್ನು ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಪೋಸ್ಟ್ ಮಾಡಿದ್ದಾನೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಅಮಿತ್ ಚೌಹಾಣ್ ಎಂದು ಗುರುತಿಸಲಾಗಿದ್ದು, ಗುರುಗ್ರಾಮದಿಂದ 28 ಕಿ.ಮೀ.ದೂರದ ಪಟೌಡಿ ನಿವಾಸಿ ಎಂದು ಪೊಲೀಸರು ಹೇಳಿದ್ದಾರೆ.
ಕುಟುಂಬದ ವಿಚಾರಕ್ಕೆ ಸಂಬಂಧಿಸಿದಂತೆ ಚೌಹಾಣ್ ಹಾಗೂ ಆತನ ಪತ್ನಿ ಪ್ರೀತಿಯ ನಡುವೆ ಭಿನ್ನಾಭಿಪ್ರಾಯ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಪತ್ನಿ ಪ್ರೀತಿ ನಿನ್ನೆ ಚೌಹಾಣ್ ಜತೆ ಜಗಳವಾಡಿ ತನ್ನ ಪೋಷಕರ ಜತೆ ತವರು ಮನೆಗೆ ತೆರಳಿದ್ದರು. ಇದೇ ಕಾರಣಕ್ಕೆ ಬೇಸರಗೊಂಡ ಚೌಹಾಣ್ ಫೇಸ್ಬುಕ್ ನಲ್ಲಿ ಲೈವ್ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ಸುಭಾಶ್ ಬೊಕೆನ್ ಅವರು ಹೇಳಿದ್ದಾರೆ.
ಚೌಹಾಣ್ ನೇಣಿಗೆ ಶರಣಾಗುವ ಮುನ್ನ ತನ್ನ ಆತ್ಮಹತ್ಯೆ ವಿಡಿಯೋವನ್ನು ಶೇರ್ ಮಾಡುವಂತೆ ಸ್ನೇಹಿತರಿಗೆ ಕೇಳಿಕೊಂಡಿದ್ದು, ಆತ ಖಿನ್ನತೆಯಿಂದ ಬಳಲುತ್ತಿದ್ದು, ರೋಹ್ಟಕ್ನ ಪಿಜಿಐಎಂಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ತಿಳಿಸಿದ್ದಾರೆ.
ಪೊಲೀಸರಿಗೆ ವಿಷಯ ತಿಳಿಸದೆ ಕುಟುಂಬಸ್ಥರು ಚೌಹಾಣ್ ಅಂತ್ಯ ಸಂಸ್ಕಾರ ಮಾಡಿದ್ದು, ಪ್ರರಣದ ಕುರಿತು ತನಿಖೆ ನಡೆಸುತ್ತಿರುವುದಾಗಿ ಬೊಕೆನ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


