ರಾಜೀವ್ ಗಾಂಧಿಯವರ ಅಸ್ಸಾಂ ಒಪ್ಪಂದವೂ ಎನ್ ಆರ್ ಸಿಯ ಉದ್ದೇಶವನ್ನೇ ಹೊಂದಿತ್ತು: ಅಮಿತ್ ಶಾ
ಎನ್ ಆರ್ ಸಿ (ನಾಗರಿಕರ ರಾಷ್ಟ್ರೀಯ ನೋಂದಣಿ) ಗೆ ವಿರೋಧ ವ್ಯಕ್ತಪಡಿಸಿ ಸಂಸತ್ ಕಲಾಪದಲ್ಲಿ ಗದ್ದಲ ಉಂಟು ಮಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ...

Published On :
ನವದೆಹಲಿ: ಎನ್ ಆರ್ ಸಿ (ನಾಗರಿಕರ ರಾಷ್ಟ್ರೀಯ ನೋಂದಣಿ) ಗೆ ವಿರೋಧ ವ್ಯಕ್ತಪಡಿಸಿ ಸಂಸತ್ ಕಲಾಪದಲ್ಲಿ ಗದ್ದಲ ಉಂಟು ಮಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಸಭೆಯಲ್ಲಿ ತಿರುಗೇಟು ನೀಡಿದ್ದು, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಅಸ್ಸಾಂ ಒಪ್ಪಂದವೂ ಸಹ ಎನ್ ಅರ್ ಸಿಯ ಉದ್ದೇಶವನ್ನೇ ಹೊಂದಿತ್ತು ಎಂದು ಹೇಳಿದ್ದಾರೆ.
ಎನ್ಆರ್ಸಿ (ನಾಗರಿಕರ ರಾಷ್ಟ್ರೀಯ ನೋಂದಣಿ) ಕರಡಿನ ಬಗ್ಗೆ ಸಂಸತ್ ನಲ್ಲಿ ಜು.31 ರ ಕಲಾಪದಲ್ಲೂ ಚರ್ಚೆ ಮುಂದುವರೆದಿದೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದರು ಎನ್ ಆರ್ ಸಿ ಕರಡನ್ನು ವಿರೋಧಿಸಿದ್ದು, ಗದ್ದಲ ಉಂಟು ಮಾಡಿದ್ದಾರೆ. ಕಾಂಗ್ರೆಸ್ ಸದಸ್ಯರ ಗದ್ದಲಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ವೆಂಕಯ್ಯ ನಾಯ್ಡು, ಕಾಂಗ್ರೆಸ್ಸಿನ ಹಿರಿಯ ಸದಸ್ಯರು ಪ್ರಜಾಪ್ರಭುತ್ವದ ಅವಹೇಳನ ಮಾಡುತ್ತಿದ್ದಾರೆ. ದೇವರೇ ಪ್ರಜಾಪ್ರಭುತ್ವವನ್ನು ಕಾಪಾಡಬೇಕು ಎಂದು ಹೇಳಿದ್ದಾರೆ.
ಇದೇ ವೇಳೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸದಸ್ಯರಿಗೆ ಉತ್ತರ ನೀಡಿರುವ ಅಮಿತ್ ಶಾ, 1985 ರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅಸ್ಸಾಂ ಒಪ್ಪಂದಕ್ಕೆ ಸಹಿ ಹಾಕಿದ್ದರು. ಅದರಲ್ಲಿರುವ ಅಂಶಗಳೇ ಎನ್ ಆರ್ ಸಿಯಲ್ಲೂ ಇದೆ. ಆದರೆ ಅದನ್ನು ಜಾರಿಗೊಳಿಸಲು ಕಾಂಗ್ರೆಸ್ಸಿಗರಿಗೆ ಧೈರ್ಯ ಇರಲಿಲ್ಲ, ಆ ಕೆಲಸವನ್ನು ನಾವು ಮಾಡುತ್ತಿದ್ದೆವೆ ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Amit Shahರಾಜೀವ್ ಗಾಂಧಿಅಮಿತ್ ಶಾNRCಎನ್ ಆರ್ ಸಿNRC issueRajiv Gandhi\'s Assam accordParliament Session 2018ಅಸ್ಸಾಂ ಒಪ್ಪಂದಸಂಸತ್ ಅಧಿವೇಶನ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


