ದೇಶ

ವ್ಯಾಪಂ ಹಗರಣ: ನಾಲ್ವರು ಆರೋಪಿಗಳಿಗೆ 4 ವರ್ಷ ಜೈಲು

ವ್ಯಾಪಂ ಹಗರಣದ ನಾಲ್ವರು ಆರೋಪಿಗಳಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸಿಬಿಐ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.

ವ್ಯಾಪಂ ಹಗರಣ: ನಾಲ್ವರು ಆರೋಪಿಗಳಿಗೆ 4 ವರ್ಷ ಜೈಲು
ವ್ಯಾಪಂ ಹಗರಣ: ನಾಲ್ವರು ಆರೋಪಿಗಳಿಗೆ 4 ವರ್ಷ ಜೈಲು
Published On :
ಜಬಲ್ಪುರ್(ಮಧ್ಯ ಪ್ರದೇಶ): ವ್ಯಾಪಂ ಹಗರಣದ ನಾಲ್ವರು ಆರೋಪಿಗಳಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸಿಬಿಐ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.
ಮಧ್ಯಪ್ರದೇಶ ವೃತ್ತಿಪರ ಪರೀಕ್ಷಾ ಮಂಡಳಿ ನಡೆಸಿದ ಪ್ರವೇಶ ಮತ್ತು ನೇಮಕಾತಿ ವೇಳೆ ಅಕ್ರಮಗಳು ನಡೆಇದ್ದು 1995ರಿಂದ ಈಚೆಗೆ ನಡೆದ ವ್ಯಾಪಕ ಹಗರಣದಲ್ಲಿ  ರಾಜಕಾರಣಿಗಳು, ಹಿರಿಯ ಅಧಿಕಾರಿಗಳು ಮತ್ತು ಉದ್ಯಮಿಗಳು ಭಾಗಿಗಳಾಗಿದ್ದರು.
ವ್ಯಾಪಂ ನಡೆಸಿದ್ದ 13 ವಿವಿಧ ಪರೀಕ್ಷೆಗಳಲ್ಲಿ ಅಕ್ರಮ ನಡೆಸಲಾಗಿದೆ.ಆಹಾರ ಪರೀಕ್ಷಕರು, ಸಂಚಾರಿ ಪೋಲೀಸರು,  ಪೊಲೀಸ್ ಸಿಬ್ಬಂದಿ, ಶಾಲಾ ಶಿಕ್ಷಕರು, ಡೈರಿ ಅಧಿಕಾರಿಗಳು, ಅರಣ್ಯ ರಕ್ಷಕ ಸೇರಿ ಅನೇಕ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಗಾಗಿ ನಡೆದಿದ್ದ ಪರೀಕ್ಷೆಯಲ್ಲಿ ಹಗರಣ ನಡೆದಿದೆ ಎಂದು ಹೇಳಲಾಗಿತ್ತು.
ಸುಮಾರು 3.2 ದಶಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಗಳನ್ನು ಬರೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.