ದೇಶ

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಜೂನ್ 6ಕ್ಕೆ ಸಿಬಿಐ ನಿಂದ ಚಿದಂಬರಂ ವಿಚಾರಣೆ

ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ ಸಂಬಂಧ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನು ಜೂನ್ 6ರಂದು ಕೇಂದ್ರೀಯ ತನಿಖಾ ದಳ ವಿಚಾರಣೆ ನಡೆಸಲಿದೆ.

ಐಎನ್ಎಕ್ಸ್  ಮೀಡಿಯಾ ಪ್ರಕರಣ: ಜೂನ್ 6ಕ್ಕೆ ಸಿಬಿಐ ನಿಂದ ಚಿದಂಬರಂ ವಿಚಾರಣೆ
ಐಎನ್ಎಕ್ಸ್ ಮೀಡಿಯಾ ಪ್ರಕರಣ: ಜೂನ್ 6ಕ್ಕೆ ಸಿಬಿಐ ನಿಂದ ಚಿದಂಬರಂ ವಿಚಾರಣೆ
Published On :
ನವದೆಹಲಿ: ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ ಸಂಬಂಧ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನು ಜೂನ್ 6ರಂದು ಕೇಂದ್ರೀಯ ತನಿಖಾ ದಳ ವಿಚಾರಣೆ ನಡೆಸಲಿದೆ.
ಗುರುವಾರವಷ್ಟೇ ಈ ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್  ಜುಲೈ 3ರವರೆಗೆ ಚಿದಂಬರಂ  ಅವರನ್ನು ಬಂಧಿಸದಂತೆ ಮಧ್ಯಂತರ ರಕ್ಷಣೆ ನಿಡಿತ್ತು.
ಏರ್ಸೆಲ್-ಮ್ಯಾಕ್ಸಿಸ್ 3,500 ಕೋಟಿ ರೂ. ಮತ್ತು ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ 305 ಕೋಟಿ ರೂ.ಗಳ ಅಕ್ರಮ ವ್ಯವಹಾರದಲ್ಲಿ ಚಿದಂಬರಂ ಕೈವಾಡ ಕಂಡುಬಂದಿದೆ ಎಂದು ತನಿಕಾ ದಳಗಳು ಹೇಳಿದೆ. ಯುಪಿಎ-1 ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದ ಚಿದಂಬರಂ ಈ ಎರಡೂ ಸಂಸ್ಥೆಗಳಿಗೆ  ಅನುಕೂಲವಾಗುವಂತೆ  ವಿದೇಶೀ ಹೂಡಿಕೆ ಪ್ರಚಾರ ಮಂಡಳಿಗೆ ಅನುಮತಿ ನೀಡಿದ್ದರು.
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ಕಳೆದ ವರ್ಷ ಮೇ 15ರಂದು ಸಿಬಿಐ ಎಫ್ಐಆರ್ ದಾಖಲಿಸಿತ್ತು. ಇದೇ ಪ್ರಕರಣದಲ್ಲಿ 10 ಲಕ್ಷ ರೂ. ಪಡೆದ ಆರೋಪಕ್ಕೆ ಸಂಬಂಧಿಸಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಬಂಧಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.