ದೇಶ

ಉತ್ತರ ಪ್ರದೇಶದಲ್ಲಿ ಚಂಡಮಾರುತಕ್ಕೆ 17 ಮಂದಿ ಬಲಿ, 9 ಗಾಯ

ಉತ್ತರ ಪ್ರದೇಶದ ವಿವಿಧ ಕಡೆಗಳಲ್ಲಿ ಚಂಡಮಾರುತದ ಅಬ್ಬರ ಜೋರಾಗಿದ್ದು, ಈವರೆಗೂ 15 ಮಂದಿ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಇಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ  ಚಂಡಮಾರುತಕ್ಕೆ  17 ಮಂದಿ ಬಲಿ,  9 ಗಾಯ
ಸಾಂದರ್ಭಿಕ ಚಿತ್ರ
Published On :

ಉತ್ತರ ಪ್ರದೇಶ: ಉತ್ತರ ಪ್ರದೇಶದ  ವಿವಿಧ ಕಡೆಗಳಲ್ಲಿ ವಿನಾಶಕಾರಿ ಚಂಡಮಾರುತದ ಅಬ್ಬರಕ್ಕೆ ಸಿಲುಕಿ  17  ಮಂದಿ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಇಂದು ತಿಳಿಸಿದ್ದಾರೆ.

ಮುಂದಿನ ಎರಡು ದಿನಗಳ ಕಾಲ ಒಳನಾಡು ಭಾಗದಲ್ಲಿ  ಮಳೆ ಅಥವಾ  ಚಂಡಮಾರುತ  ಹೆಚ್ಚಾಗಲಿದೆ  ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

 ಈ ತಿಂಗಳು ದೇಶದ ವಿವಿಧ ರಾಜ್ಯಗಳಲ್ಲಿ ಉಂಟಾದ ಚಂಡಮಾರುತದ ಘಟನೆಗಳು ವಿನಾಶದ ಪ್ರವಾಹವನ್ನು ತಂದೊಡ್ಡಿದ್ದವು.  ಮೇ 2, 3 ರಂದು  ಐದು ರಾಜ್ಯಗಳಲ್ಲಿ  ಚಂಡಮಾರುತದ ಅಬ್ಬರಕ್ಕೆ ಸಿಲುಕಿ 134 ಮಂದಿ ಸಾವನ್ನಪ್ಪಿದ್ದು, ಸುಮಾರು 400 ಮಂದಿ ಗಾಯಗೊಂಡಿದ್ದರು.
 ಚಂಡಮಾರುತದಿಂದಾಗಿ ಉತ್ತರಪ್ರದೇಶದಲ್ಲಿಯೇ ಭಾರಿ ಹಾನಿಯಾಗಿದ್ದು, ಸುಮಾರು 80 ಮಂದಿ ಮೃತಪಟ್ಟಿದ್ದಾರೆ. ಅವರಲ್ಲಿ ಹೆಚ್ಚಿನವರು ಆಗ್ರಾ ಜಿಲ್ಲೆಗೆ ಸೇರಿದವರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.