ಪಶ್ಚಿಮಬಂಗಾಳದಲ್ಲಿ ಮತ್ತೋರ್ವ ಬಿಜೆಪಿ ನಾಯಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ, ಸಿಐಡಿ ತನಿಖೆ!
ಬಲರಾಮಪುರದ ದೇವ ಗ್ರಾಮದ ನಿವಾಸಿ 30 ವರ್ಷದ ಬಿಜೆಪಿ ಕಾರ್ಯಕರ್ತ ದುಲಾಲ್ ಕುಮಾರ್ ಶುಕ್ರವಾರ ರಾತ್ರಿಯಿಂದ ನಾಪತ್ತೆಯಾಗಿದ್ದು ಇದೀಗ ಅವರ ಮೃತದೇಹ ಹೈ ಟೆನ್ಷನ್ ಟವರ್...

Published On :
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು, ನಾಯಕರ ಮೇಲಿನ ಹಲ್ಲೆಗಳು ದಿನ ಕಳೆದಂತೆ ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ 18 ವರ್ಷದ ಬಿಜೆಪಿ ನಾಯಕ ತ್ರಿಲೋಚನ್ ಮಹೊಟೊಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದೀಗ ಮತ್ತೋರ್ವ ಬಿಜೆಪಿ ನಾಯಕನ ಮೃತದೇಹ ಪತ್ತೆಯಾಗಿದೆ.
ಬಲರಾಮಪುರದ ದೇವ ಗ್ರಾಮದ ನಿವಾಸಿ 30 ವರ್ಷದ ಬಿಜೆಪಿ ಕಾರ್ಯಕರ್ತ ದುಲಾಲ್ ಕುಮಾರ್ ಶುಕ್ರವಾರ ರಾತ್ರಿಯಿಂದ ನಾಪತ್ತೆಯಾಗಿದ್ದು ಇದೀಗ ಅವರ ಮೃತದೇಹ ಹೈ ಟೆನ್ಷನ್ ಟವರ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕಳೆದ ರಾತ್ರಿ ದುಲಾಲ್ ಸ್ವಲ್ಪ ಕೆಲಸವಿರುವುದಾಗಿ ಹೇಳಿ ಹೊರಗೆ ಹೋಗಿದ್ದರು. ಆದರೆ ರಾತ್ರಿ ಮನೆಗೆ ದುಲಾಲ್ ಹಿಂದಿರುಗಿರಲಿಲ್ಲ. ಇದರಿಂದ ಆತಂಕಕ್ಕೆ ಸಿಲುಕ್ಕಿದ್ದ ಸಹೋದರ ದುಲಾಲ್ ಮೊಬೈಲ್ ಗೆ ಸತತವಾಗಿ ಕರೆ ಮಾಡುತ್ತಿದ್ದರು. ಕರೆಯನ್ನು ಕಟ್ ಮಾಡುತ್ತಿದ್ದರು. ಆದರೆ ಬೆಳಗ್ಗೆ ಎದ್ದು ನೋಡಿದಾಗ ಆತನ ಮೃತದೇಹ ಪತ್ತೆಯಾಗಿದ್ದು ಆತನ ಬೈಕ್ ಹಳ್ಳವೊಂದರಲ್ಲಿ ಹತ್ತೆಯಾಗಿದೆ.
ಪಶ್ಚಿಮ ಬಂಗಾಳದಲ್ಲಿ ಸರಣಿ ಕೊಲೆಗಳಾಗುತ್ತಿರುವುದಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನಾಲ್ಕು ವಾರಗಳಲ್ಲಿ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಇನ್ನು ಈ ಪ್ರಕರಣ ಸಂಬಂಧ ಸಿಐಡಿ ತನಿಖೆಯನ್ನು ನಡೆಸುತ್ತಿದೆ.
18 ವರ್ಷದ ಬಿಜೆಪಿ ನಾಯಕ ತ್ರಿಲೋಚನ್ ಮಹೊಟೊಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆತನ ಬಟ್ಟೆ ಮೇಲೆ ಕೇಸರಿ ಪರ ಕೆಲಸ ಮಾಡುವವರಿಗೆ ಇದೇ ಶಿಕ್ಷೆ ಎಂದು ಬರೆಯಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


