ಶೀನಾ ಬೋರಾ ಹತ್ಯೆ ಪ್ರಕರಣ: ಎದೆನೋವಿನಿಂದ ಇಂದ್ರಾಣಿ ಮುಖರ್ಜಿ ಆಸ್ಪತ್ರೆಗೆ ದಾಖಲು
ಶೀನಾ ಬೋರಾ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಐಎನ್ ಎಕ್ಸ್ ಮೀಡಿಯಾ ಮುಖ್ಯಸ್ಥೆ ಇಂದ್ರಾಣಿ ಮುಖರ್ಜಿ ತೀವ್ರ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ...

Published On :
ಮುಂಬಯಿ: ಶೀನಾ ಬೋರಾ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಐಎನ್ ಎಕ್ಸ್ ಮೀಡಿಯಾ ಮುಖ್ಯಸ್ಥೆ ಇಂದ್ರಾಣಿ ಮುಖರ್ಜಿ ತೀವ್ರ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎದೆನೋವಿನಿಂದ ಬಳಲುತ್ತಿದ್ದ ಇಂದ್ರಾಣಿಯನ್ನು ಐಸಿಯು ನಲ್ಲಿಟ್ಟು ಚಿಕಿತ್ಸೆ ಕೊಡಲಾಗುತ್ತಿದೆ. ಆಕೆಲ ಅಗತ್ಯವಿರುವ ಎಲ್ಲಾ ಚಿಕಿತ್ಸೆಗಳನ್ನು ನೀಡಲಾಗುತ್ತಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.
ಹಿಂದೊಮ್ಮೆ ಇದೇ ರೀತಿ ಡ್ರಗ್ ಓವರ್ ಡೋಸ್ ಆಗಿ ಆಸ್ಪತ್ರೆ ಸೇರಿದ್ದರು. ಇದೀಗ ಮತ್ತೆ ಅಸ್ವಸ್ಥರಾಗಿದ್ದು ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದೀಗ ಆಕೆ ಪ್ರಜ್ಞಾಹೀನ ಸ್ಥಿತಿಗೆ ತಲುಪಲು ಕಾರಣವೇನೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆಕೆಯ ಆರೋಗ್ಯ ಸ್ಥಿತಿ ಗತಿ ಬಗ್ಗೆ ತೀವ್ರ ತಪಾಸಣೆ ನಡೆಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ದಾಖಲುಇಂದ್ರಾಣಿ ಮುಖರ್ಜಿIndrani MukerjeaSheena Bora murder caseಜೆಜೆ ಆಸ್ಪತ್ರೆAdmitJ J Hospitalಶೀನಾಬೋರಾ ಕೊಲೆ ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


