ದೇಶ

ತೈಲ ಬೆಲೆ ಏರಿಕೆ ವಿರೋಧಿಸಿ ಟ್ವೀಟ್ ಮೋರ್ಚಾ ಅಭಿಯಾನ!

ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಟ್ವೀಟ್ ಮೋರ್ಚಾ ಪ್ರತಿಭಟನೆ ನಡೆಸಿದ್ದಾರೆ.

ತೈಲ ಬೆಲೆ ಏರಿಕೆ ವಿರೋಧಿಸಿ ಟ್ವೀಟ್ ಮೋರ್ಚಾ ಅಭಿಯಾನ!
ತೈಲ ಬೆಲೆ ಏರಿಕೆ ವಿರೋಧಿಸಿ ಟ್ವೀಟ್ ಮೋರ್ಚಾ ಅಭಿಯಾನ!
Published On :
ಮುಂಬೈ: ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಟ್ವೀಟ್ ಮೋರ್ಚಾ ಪ್ರತಿಭಟನೆ ನಡೆಸಿದ್ದಾರೆ.
ಟ್ವೀಟ್ ಮೋರ್ಚಾ ಅಭಿಯಾನದಲ್ಲಿ ಭಾಗವಹಿಸಿದ್ದ ಲಕ್ಷಾಂತರ ಜನರು ತೈಲ ಬೆಲೆ ಏರಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಟ್ವೀಟ್ ಮಾಡಿದ್ದಾರೆ. ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ನೇತೃತ್ವದಲ್ಲಿ ಆಯೋಜನೆಗೊಂಡಿದ್ದ ಟ್ವೀಟ್ ಮೋರ್ಚಾ ಅಭಿಯಾನದಲ್ಲಿ ಬರಹಗಾರ ಸುಚೇತ ದಲಾಲ್ ಸೇರಿದಂತೆ  ಮುಂಬೈ ನ ಹಲವು ಗಣ್ಯರು ನಾಗರಿಕರು ಟ್ವೀಟ್ ಮಾಡಿದ್ದಾರೆ. 
ಏರುತ್ತಿರುವ ತೈಲ ಬೆಲೆಗಳನ್ನು ಇಳಿಕೆ ಮಾಡುವುದಕ್ಕೆ ಸ್ಪಂದಿಸದೇ ಇರುವ ಕೇಂದ್ರ ಬಿಜೆಪಿ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರುವುದಕ್ಕೆ ಈ ರೀತಿಯ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ನಿರುಪಮ್ ಹೇಳಿದ್ದಾರೆ. ಮುಂಬೈ ನಗರದಲ್ಲಿ ಸತತವಾಗಿ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿದ್ದು, ಬಿಜೆಪಿ ಸಂವೇಧನಾಶೀಲತೆಯನ್ನೇ ಕಳೆದುಕೊಳ್ಳುವುದರಲ್ಲಿ ಹೊಸ ಮಟ್ಟವನ್ನು ತಲುಪಿದೆ, ಜನರು ಇದನ್ನು ಒಪ್ಪುವುದಿಲ್ಲ ಎಂದು ಸಂಜಯ್ ನಿರುಪಮ್ ಹೇಳಿದ್ದಾರೆ. 
#TweetMorcha and #CutFuelTaxes ಹ್ಯಾಷ್ ಟ್ಯಾಗ್ ಬಳಸಿ ಪ್ರಧಾನಿ ಮೋದಿ ಹಾಗೂ ದೇವೇಂದ್ರ ಫಡ್ನವೀಸ್ ಗೆ ಟ್ವೀಟ್ ಮಾಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.