ದೇಶ

2019ರ ಲೋಕಸಭಾ ಚುನಾವಣೆಗೆ ವಿಪಕ್ಷಗಳ ಮೈತ್ರಿ ಕೆಲಸಕ್ಕೆ ಬರುವುದಿಲ್ಲ; ಕೇಂದ್ರ ಸಚಿವ ಜವಡೇಕರ್

2019ರ ಲೋಕಸಭಾ ಚುನಾವಣೆಗೆ ವಿರೋಧ ಪಕ್ಷಗಳ ಮೈತ್ರಿ ಕೆಲಸಕ್ಕೆ ಬರುವುದಿಲ್ಲ ಎಂದು ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಶುಕ್ರವಾರ ಹೇಳಿದ್ದಾರೆ...

2019ರ ಲೋಕಸಭಾ ಚುನಾವಣೆಗೆ ವಿಪಕ್ಷಗಳ ಮೈತ್ರಿ ಕೆಲಸಕ್ಕೆ ಬರುವುದಿಲ್ಲ; ಕೇಂದ್ರ ಸಚಿವ ಜವಡೇಕರ್
ಕೇಂದ್ರ ಸಚಿವ ಪ್ರಕಾಶ್ ಜವಡೇಕರ್
Published On :
ಡೆಹ್ರಾಡೂನ್; 2019ರ ಲೋಕಸಭಾ ಚುನಾವಣೆಗೆ ವಿರೋಧ ಪಕ್ಷಗಳ ಮೈತ್ರಿ ಕೆಲಸಕ್ಕೆ ಬರುವುದಿಲ್ಲ ಎಂದು ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಶುಕ್ರವಾರ ಹೇಳಿದ್ದಾರೆ. 
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ದೇಶಕ್ಕಾಗಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಯ ವಿರುದ್ಧ ವಿರೋಧ ಪಕ್ಷಗಳು ಒಗ್ಗೂಡಿದ್ದು, ಇಂತಹ ಮೈತ್ರಿ ದೀರ್ಘಕಾಲದವರೆಗೂ ಉಳಿಯುವುದಿಲ್ಲ ಎಂದು ಹೇಳಿದ್ದಾರೆ. 
ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ವಿರೋಧ ಪಕ್ಷಗಳು ಒಗ್ಗೂಡಿದಿದ್ದರೆ, ಅದಕ್ಕೆ ಅರ್ಥವಿರುತ್ತಿತ್ತು. ಏಕೆಂದರೆ, ಪ್ರಜಾಪ್ರಭುತ್ವ ರಕ್ಷಣೆ ಮಾಡುವುದಕ್ಕಾಗಿ ಒಗ್ಗೂಡಿವೆ ಎಂದಾದರೂ ಹೇಳಬಹುದಿತ್ತು. ಆದರೆ, ಇಂದು ಯಾವುದೇ ರೀತಿಯ ಪರಿಸ್ಥಿತಿಗಳಿಲ್ಲದಿದ್ದರೂ ವಿರೋಧ ಪಕ್ಷಗಳು ಒಗ್ಗೂಡಿವೆ. 
ಬಿಜೆಪಿ ಆಡಳಿತ ನಡೆಸುತ್ತಿರುವ ಯಾವುದೇ ರಾಜ್ಯದಲ್ಲಿಯೂ ಲೋಕಾಯುಕ್ತವನ್ನು ರಚನೆ ಮಾಡಿಲ್ಲ. ಏಕೆಂದರೆ, ಭ್ರಷ್ಟಚಾರದ ವಿರುದ್ಧ ಪಕ್ಷವೇ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಭ್ರಷ್ಟಾಚಾರ ಕುರಿತಂತೆ ಕಾನೂನು ಜಾರಿಗೆ ತರಲು ಕೇಂದ್ರ ಯತ್ನ ನಡೆಸುತ್ತಿಲೇ ಆದರೆ, ವಿರೋಧಕ್ಷಗಳು ಅದಕ್ಕೆ ಅವಕಾಶ ನೀಡುತ್ತಿಲ್ಲ. ಕಪ್ಪುಹಣ ಹಾಗೂ ಭ್ರಷ್ಟಾಚಾರದ ವಿರುದ್ಧ ಕೇಂದ್ರ ಮೂರು ಕಾನೂನನ್ನು ರಚನೆ ಮಾಡಿದೆ. ಭ್ರಷ್ಟಾಚಾರ ನಿಯಂತ್ರಿಸಲು ಮತ್ತಷ್ಟು ಕಾನೂನು ಜಾರಿಗೆ ತರಲು ಯೋಜನೆ ರೂಪಿಸಿದೆ. ಆದರೆ, ಸಂಸತ್ತು ಸುಗಮವಾಗಿ ಕಾರ್ಯ ನಡೆಸಲು ಕಾಂಗ್ರೆಸ್ ಬಿಡುತ್ತಿಲ್ಲ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.