ಮೂರು ರಾಷ್ಟ್ರಗಳ ಯಶಸ್ವಿ ಪ್ರವಾಸದ ನಂತರ ಸ್ವದೇಶಕ್ಕೆ ಆಗಮಿಸಿದ ಪ್ರಧಾನಿ ಮೋದಿ
ಇಂಡೋನೇಷ್ಯಾ, ಮಲೇಷ್ಯಾ, ಸಿಂಗಾಪುರ ರಾಷ್ಟ್ರಗಳ ಮಹತ್ವದ ಯಶಸ್ವಿ ಪ್ರವಾಸದ ನಂತರ ಪ್ರಧಾನಮಂತ್ರಿ ನರೇಂದ್ರಮೋದಿ ಇಂದು ನವದೆಹಲಿಗೆ ವಾಪಾಸ್ಸಾಗಿದ್ದಾರೆ.

ನವದೆಹಲಿ: ಇಂಡೋನೇಷ್ಯಾ, ಮಲೇಷ್ಯಾ, ಸಿಂಗಾಪುರ ರಾಷ್ಟ್ರಗಳ ಮಹತ್ವದ ಯಶಸ್ವಿ ಪ್ರವಾಸದ ನಂತರ ಪ್ರಧಾನಮಂತ್ರಿ ನರೇಂದ್ರಮೋದಿ ಇಂದು ನವದೆಹಲಿಗೆ ವಾಪಾಸ್ಸಾಗಿದ್ದಾರೆ.
ಮೂರು ರಾಷ್ಟ್ರಗಳಿಗೆ ಪ್ರಧಾನಿ ಭೇಟಿಯಿಂದಾಗಿ ಭಾರತದ ಪೂರ್ವ ರಾಷ್ಟ್ರಗಳ ನೀತಿಯಲ್ಲಿ ವೇಗ ಪಡೆದುಕೊಂಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಟ್ವೀಟರ್ ನಲ್ಲಿ ಹೇಳಿದ್ದಾರೆ.
ಪ್ರಧಾನಿ ಭೇಟಿ ಸಂದರ್ಭದಲ್ಲಿ ಸಿಂಗಾಪುರದ ಪ್ರಧಾನಿ ಲೀ ಸೈಯಿನ್ ಲೂಂಗ್ ಅವರೊಂದಿಗೆ ವ್ಯಾಪಕವಾದ ಮಾತುಕತೆ ನಡೆಸಿದ್ದಾರೆ. ಶಾಂಘ್ರೈ ಲಾ ಸಮ್ಮೇಳನದಲ್ಲಿ ಏಷ್ಯಾದ ಮುಂಚೂಣಿ ರಾಷ್ಟ್ರಗಳಾದ ಭಾರತ ಹಾಗೂ ಚೀನಾದ ರಕ್ಷಣೆ ವ್ಯವಹಾರದ ಕಾರ್ಯತಂತ್ರ ಕುರಿತಂತೆ ಭಾಷಣ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಶುಕ್ರವಾರದಂದು ಸಮ್ಮೇಳನದಲ್ಲಿ ಮಾತನಾಡಿದ ಅವರು, ಪೈಪೋಟಿಯ ಏಷ್ಯಾ" ಈ ಪ್ರದೇಶವನ್ನು ಮತ್ತೆ ಹಿಡಿದಿಟ್ಟುಕೊಳ್ಳಲಿದೆ . ಏಷ್ಯಾ ರಾಷ್ಟ್ರಗಳ ಸಹಕಾರ ಪ್ರಸ್ತುತದ ಶತಮಾನವನ್ನು ಬದಲಾಯಿಸಲಿದೆ ಎಂದು ಹೇಳಿಕೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


