ದೇಶ

ಉತ್ತರಾಖಂಡ, ಉತ್ತರ ಪ್ರದೇಶದಲ್ಲಿ ಚಂಡಮಾರುತಕ್ಕೆ ಐವರ ಬಲಿ

ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಬೀಸುತ್ತಿರುವ ಚಂಡ ಮಾರುತಕ್ಕೆ ಸುಮಾರು ಐದು ಮಂದಿ ಬಲಿಯಾಗಿದ್ದು , ಆರು ಮಂದಿ ಗಾಯಗೊಂಡಿದ್ದಾರೆ....

ಉತ್ತರಾಖಂಡ, ಉತ್ತರ ಪ್ರದೇಶದಲ್ಲಿ ಚಂಡಮಾರುತಕ್ಕೆ ಐವರ ಬಲಿ
ಸಾಂದರ್ಭಿಕ ಚಿತ್ರ
Published On :
ಮೊರದಾಬಾದ್: ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಬೀಸುತ್ತಿರುವ ಚಂಡ ಮಾರುತಕ್ಕೆ ಸುಮಾರು  ಐದು ಮಂದಿ ಬಲಿಯಾಗಿದ್ದು , ಆರು ಮಂದಿ ಗಾಯಗೊಂಡಿದ್ದಾರೆ.
ಉತ್ತರ ಪ್ರದೇಶದ ಮೊರದಾಬಾದ್ ನಲ್ಲಿ ಇಬ್ಬರು ಹಾಗೂ ಉತ್ತರಾಖಂಡ್ ನ ಮಂಡಲ್ ನಲ್ಲಿ ಮೂವರು ಸಾವನ್ನಪ್ಪಿದ್ದಾರೆ, ಕೆಲ ಪ್ರದೇಶಗಳಲ್ಲಿ ಮರ, ವಿದ್ಯುತ್ ಕಂಬ ಮುರಿದು ಬಿದ್ದಿವೆ.
ಗುರುವಾರ ಬೆಳಗ್ಗೆ ಭಾರೀ ಪ್ರಮಾಣದ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಸೂಚನೆ ನೀಡಿತ್ತು. ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಪ್ರಬಲವಾಗ ಶೀತಗಾಳಿ ಬೀಸಲಿದೆ ಎಂದು ಹೇಳಿತ್ತು,
ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಚಂಡಮಾರುತಕ್ಕೆ 30 ಮಂದಿ ಬಲಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.