ಜಮ್ಮು-ಕಾಶ್ಮೀರ; ಕದನ ವಿರಾಮ ಉಲ್ಲಂಘಿಸಿದ ಪಾಕ್, ಅಪ್ರಚೋದಿತ ಗುಂಡಿನ ದಾಳಿಗೆ 2 ಯೋಧರು ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು...

Published On :
ಶ್ರೀನಗರ; ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿರುವ ಘಟನೆ ಭಾನುವಾರ ನಡೆದಿದೆ.
ಅಖ್ನೂರ್ ಸೆಕ್ಟರ್'ನ ಪ್ರಗ್ವಾಲ್ ಪ್ರದೇಶದ ಅಂತರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಇಬ್ಬರನ್ನೂ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿತ್ತು. ಇದೀಗ ಇಬ್ಬರೂ ಯೋಧರು ಹುತಾತ್ಮರಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ದಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತ ಕೂಡ ದಿಟ್ಟ ಉತ್ತರವನ್ನು ನೀಡುತ್ತಿದೆ. ಗಡಿಯಲ್ಲಿ ಎರಡು ಸೇನಾ ಕಮಾಂಡರ್ ಪಡೆಗಳು ಆಗಮಿಸಿದ್ದು, ಗಡಿ ನಿಯಂತ್ರಣ ರೇಘೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿನ ಪರಿಸ್ಥಿತಿಗಳನ್ನು ಅವಲೋಕನ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತPakistanಪಾಕಿಸ್ತಾನಜಮ್ಮು ಮತ್ತು ಕಾಶ್ಮೀರCeasefire ViolationJammu and Kashmirಕದನ ವಿರಾಮ ಉಲ್ಲಂಘನೆArmy martyrಸೇನೆ ಹುತಾತ್ಮ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


