2019 ಲೋಕಸಭಾ ಚುನಾವಣೆಗೆ ರಣತಂತ್ರ: ಮಧ್ಯಪ್ರದೇಶದಲ್ಲಿ ಬಿಎಸ್'ಪಿ-ಕಾಂಗ್ರೆಸ್ ಮೈತ್ರಿ?
2019 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಪಣತೊಟ್ಟು ನಿಂತಿರುವ ಕಾಂಗ್ರೆಸ್, ಕರ್ನಾಟಕದಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿ ಯಶಸ್ವಿಯಾದ ಬಳಿಕ ಇದೀಗ ಮಧ್ಯಪ್ರದೇಶದಲ್ಲಿಯೂ ಬಿಎಸ್'ಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ ಎಂದು...

Published On :
ನವದೆಹಲಿ: 2019 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಪಣತೊಟ್ಟು ನಿಂತಿರುವ ಕಾಂಗ್ರೆಸ್, ಕರ್ನಾಟಕದಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿ ಯಶಸ್ವಿಯಾದ ಬಳಿಕ ಇದೀಗ ಮಧ್ಯಪ್ರದೇಶದಲ್ಲಿಯೂ ಬಿಎಸ್'ಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.
ಬಿಎಸ್'ಪಿ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದು, ಮೈತ್ರಿ ಕುರಿತು ಎರಡೂ ಪಕ್ಷಗಳ ನಡುವೆ ಅನೌಪಚಾರಿಕ ಮಾತುಕತೆಗಳು ಕೂಡ ನಡೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಉಭಯ ಪಕ್ಷಗಳ ನಡುವೆ ಆರಂಭಿಕ ಹಂತದ ಮಾತುಕತೆಗಳು ಆರಂಭವಾಗಿವೆ. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಿ ಉಭಯ ಪಕ್ಷಗಳು ಜೊತೆಯಾಗುವುದು ಬಹುತೇಕ ಖಚಿತವಾಗಿದೆ ಎಂದು ವರದಿಗಳು ತಿಳಿಸಿವೆ.
2019ರಲ್ಲಿ ನಡೆಯಲಿರುವ ಲೋಕಸಭಾ ಚುನಾಣೆಗೂ ಮುನ್ನ ಮಧ್ಯಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್'ಪಿ-ಕಾಂಗ್ರೆಸ್ ಮೈತ್ರಿಗೆ ಸೆಮಿಫೈನಲ್ ನಂತಾಗಿದೆ ಎಂದು ಮೂಲಗಳು ಹೇಳಿವೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿಯೂ ಮಯಾವತಿಯವರ ಬಹುಜನ ಸಮಾಜ ಪಕ್ಷ ಹೆಚ್.ಡಿ.ದೇವೇಗೌಡ ಅವರ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಿತ್ತು.
ಇದೀಗ ಮಧ್ಯಪ್ರದೇಶದಲ್ಲಿ ಬಿಎಸ್'ಪಿ ಜೊತೆಗೆ ಕೈ ಜೋಡಿಸಲು ಕಾಂಗ್ರೆಸ್ ಕಾಯುತ್ತಿದ್ದು, ಬಿಜೆಪಿ ವಿರುದ್ಧ ಚುನಾಣೆಗೆ ಭಾರಿ ಕಾರ್ಯತಂತ್ರಗಳನ್ನು ರೂಪಿಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್ModiNDAallianceಮೈತ್ರಿಮೋದಿBSP2019 ಲೋಕಸಭಾ ಚುನಾವಣೆಎನ್\'ಡಿಎಬಿಎಸ್\'ಪಿ2019 Lok Sabha elections
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


