ಪ್ರಣಬ್ ಮುಖರ್ಜಿ ಆರ್ ಎಸ್ಎಸ್ ಕಾರ್ಯಕ್ರಮಕ್ಕೆ ಹೋಗುವುದು ತಪ್ಪಲ್ಲ: 'ಕೈ' ನಾಯಕ ಸುಶೀಲ್ ಕುಮಾರ್ ಶಿಂಧೆ
ಕಾಂಗ್ರೆಸ್ ನ ನಾಯಕ ಮಾಜಿ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಪ್ರಣಬ್ ಮುಖರ್ಜಿ ಬೆನ್ನಿಗೆ ನಿಂತಿದ್ದಾರೆ.

Published On :
ನಾಗ್ಪುರ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರ್ ಎಸ್ಎಸ್ ಕಾರ್ಯರಕ್ರಮದಲ್ಲಿ ಭಾಗವಹಿಸುತ್ತಿರುವುದು ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ವಿಷಯ. ಪ್ರಣಬ್ ಮುಖರ್ಜಿ ಪರ, ವಿರೋಧದ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ಕಾಂಗ್ರೆಸ್ ನ ನಾಯಕ ಮಾಜಿ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಪ್ರಣಬ್ ಮುಖರ್ಜಿ ಬೆನ್ನಿಗೆ ನಿಂತಿದ್ದಾರೆ.
"ಪ್ರಣಬ್ ಮುಖರ್ಜಿ ಜಾತ್ಯಾತೀತ ವ್ಯಕ್ತಿ, ಅವರು ಎಂದಿಗೂ ಜಾತ್ಯಾತೀತ ತತ್ವಗಳನ್ನೇ ಮುಂದಿಡುತ್ತಾರೆ, ಆರ್ ಎಸ್ಎಸ್ ಕಾರ್ಯಕ್ರಮದಲ್ಲಿಯೂ ಅವರು ಅದನ್ನೇ ಮಾಡಲಿದ್ದಾರೆ, ಪ್ರಣಬ್ ಮುಖರ್ಜಿ ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದರಲ್ಲಿ ತಪ್ಪೇನು ಇಲ್ಲ ಎಂದು ಹೇಳಿದ್ದಾರೆ.
ಪ್ರಣಬ್ ಮುಖರ್ಜಿಯವರು ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರ ಚಿಂತನೆಗಳು ಕಾರ್ಯಕರ್ತರಲ್ಲಿ ಬದಲಾವಣೆ ತಂದರೆ ನಮಗೆ ಸಂತೋಷ ಉಂಟಾಗುತ್ತದೆ ಎಂದು ಶಿಂಧೆ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


