ಮಧ್ಯ ಪ್ರದೇಶ ನಕಲಿ ಮತದಾರರ ಪಟ್ಟಿ: ತನಿಖೆಗೆ ಚುನಾವಣಾ ಆಯೋಗದಿಂದ ತಂಡ ರಚನೆ
ಭಾರಿ ಚರ್ಚೆಗೆ ಕಾರಣವಾಗಿರುವ ಮಧ್ಯಪ್ರದೇಶ ನಕಲಿ ಮತದಾರರ ಪಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ತನಿಖೆಗೆ ಆದೇಶ ನೀಡಿದೆ.

Published On :
ನವದೆಹಲಿ: ಭಾರಿ ಚರ್ಚೆಗೆ ಕಾರಣವಾಗಿರುವ ಮಧ್ಯಪ್ರದೇಶ ನಕಲಿ ಮತದಾರರ ಪಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ತನಿಖೆಗೆ ಆದೇಶ ನೀಡಿದೆ.
ಪ್ರಸ್ತುತ ಕಾಂಗ್ರೆಸ್ ಪಕ್ಷದ ಆರೋಪದಂತೆ ಪತ್ತೆಯಾಗಿರುವ ನಕಲಿ ಮತದಾರರ ಪಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಚುನಾವಣಾ ಆಯೋಗ ತಂಡ ರಚನೆ ಮಾಡಿದೆ. ಮತದಾರರ ಪಟ್ಟಿಯಲ್ಲಿದ್ದಿರಬಹುದಾದ ದೋಷಗಳ ಕುರಿತು ತನಿಖೆ ನಡೆಸುವಂತೆ ಚುನಾವಣಾ ಆಯೋಗ ಈ ತಂಡಕ್ಕೆ ಆದೇಶಿಸಿದೆ.
ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಮತದಾರರ ಪಟ್ಟಿಯಲ್ಲಿ 60 ಲಕ್ಷ ನಕಲಿ ಮತದಾರರ ಹೆಸರು ಸೇರಿಸಿದೆ ಎಂದು ಕಾಂಗ್ರೆಸ್‌ನ ಆರೋಪದ ಬೆನ್ನಲ್ಲೇ ಚುನಾವಣಾ ಆಯೋಗ ಈ ಕ್ರಮ ಕೈಗೊಂಡಿದೆ. ತಲಾ ಇಬ್ಬರು ಅಧಿಕಾರಿಗಳು ಇರುವ ನಾಲ್ಕು ತಂಡಗಳು ತನಿಖೆ ನಡೆಸಲಿದ್ದು, ಜೂನ್ 7ರಂದು ವರದಿ ಸಲ್ಲಿಸಲಿವೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಮಧ್ಯ ಪ್ರದೇಶ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಸಲೀನಾ ಸಿಂಗ್ ಅವರು, 'ಮತದಾರರ ಪಟ್ಟಿ ಕುರಿತಂತೆ ಕಾಂಗ್ರೆಸ್ ನಿಯೋಗ ದೂರಿನಲ್ಲಿ ಪ್ರಸ್ತಾಪಿಸಿರುವ ವಿಷಯಗಳು ಹಾಗೂ ಜನಸಂಖ್ಯೆ ಆಧಾರದ ಮೇಲೆ ಮತದಾರರ ಪಟ್ಟಿಯಲ್ಲಿ ಮಾಡಲಾಗಿರುವ ದಾಖಲಾತಿ ಕುರಿತಂತೆ ಕೂಲಂಕಷ ತನಿಖೆ ನಡೆಸುವಂತೆ ತಂಡಗಳಿಗೆ ಸೂಚಿಸಲಾಗಿದೆ.
ಕಳೆದ ಫೆಬ್ರವರಿಯಲ್ಲಿಯೂ ಸಹ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ಮಧ್ಯಪ್ರದೇಶ ಮತದಾರರ ಪಟ್ಟಿಯ ವಿಚಾರವಾಗಿ ದೂರು ನೀಡಿತ್ತು. ಮುಕ್ತ, ನ್ಯಾಯಸಮ್ಮತವಾದ ಚುನಾವಣೆಗಳಿಗೆ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿತ್ತು. ಏಪ್ರಿಲ್ ತಿಂಗಳಲ್ಲಿ ಮಧ್ಯಪ್ರದೇಶ ಮತದಾರರ ಪಟ್ಟಿಯಲ್ಲಿ ಆರು ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ. ಮತ್ತೆ ಮತದಾರ ಪಟ್ಟಿಯನ್ನು ನವೀಕರಣಗೊಳಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿವಿಧಾನಸಭೆ ಚುನಾವಣೆBhopalassembly electionಮಧ್ಯ ಪ್ರದೇಶಭೋಪಾಲMadya pradeshFake Voters Listನಕಲಿ ಮತದಾರರ ಪಟ್ಟಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


