ದೇಶ

ಇನ್ನೆರಡೇ ವಾರದಲ್ಲಿ ಹಸೆಮಣೆ ಏರಬೇಕಿದ್ದ ಭಾರತೀಯ ಯೋಧ, ಪಾಕ್ ಸೈನಿಕರ ಗುಂಡಿನ ದಾಳಿಯಲ್ಲಿ ಹುತಾತ್ಮ!

ಎರಡು ವಾರಗಳಲ್ಲಿ ಮದುವೆಯಾಗಿ ಸುಖ ಸಂಸಾರ ನಡೆಸಿಬೇಕಿದ್ದ ಯೋಧನೋರ್ವ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಸೈನಿಕರು ನಡೆಸಿದ ಗುಂಡಿನ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ...

ಇನ್ನೆರಡೇ ವಾರದಲ್ಲಿ ಹಸೆಮಣೆ ಏರಬೇಕಿದ್ದ ಭಾರತೀಯ ಯೋಧ, ಪಾಕ್ ಸೈನಿಕರ ಗುಂಡಿನ ದಾಳಿಯಲ್ಲಿ ಹುತಾತ್ಮ!
ಭಾರತೀಯ ಯೋಧ
Published On :
ನವದೆಹಲಿ: ಎರಡು ವಾರಗಳಲ್ಲಿ ಮದುವೆಯಾಗಿ ಸುಖ ಸಂಸಾರ ನಡೆಸಿಬೇಕಿದ್ದ ಯೋಧನೋರ್ವ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಸೈನಿಕರು ನಡೆಸಿದ ಗುಂಡಿನ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. 
ಉತ್ತರ ಪ್ರದೇಶದ ಪತ್ತೇಪುರ್ ಮೂಲದ ವಿಜಯ್ ಕುಮಾರ್ ಪಾಂಡೆ ಅವರು ಇದೇ ಜೂನ್ 20ಕ್ಕೆ ಹಸೆಮಣೆ ಹೇರಬೇಕಿತ್ತು. ಹೀಗಾಗಿ ಜೂನ್ 5ಕ್ಕೆ ಸ್ವಗ್ರಾಮಕ್ಕೆ ಮರಳುವುದಾಗಿ ಮದುವೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿಜಯ್ ಕುಮಾರ್ ತಂದಗೆ ಕರೆ ಮಾಡಿ ತಿಳಿಸಿದ್ದರು. ಆದರೆ ನಿನ್ನೆ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ನಡೆಸಿದ ಗುಂಡಿನ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. 
ವಿಜಯ್ ಕುಮಾರ್ ಸಹೇಪುರ್ ಗ್ರಾಮದ ಆದರ್ಶ್ ಇಂಟರ್ ಕಾಲೇಜ್ ನಲ್ಲಿ ವಿದ್ಯಾಭ್ಯಾಸ ಮುಗಿಸಿದ್ದರು. ವಿಜಯ್ ಉತ್ತಮ ವಿದ್ಯಾರ್ಥಿಯಾಗಿದ್ದ ಜತೆಗೆ ದೇಶ ಸೇವೆ ಮಾಡಬೇಕೆಂದ ಕನಸ್ಸನ್ನು ಇಟ್ಟುಕೊಂಡಿದ್ದ ಎಂದು ಶಾಲೆಯ ಶಿಕ್ಷಕರು ನೋವಿನಿಂದ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.