ದೇಶ

ರಾಷ್ಟ್ರಪತಿ ಭವನದಲ್ಲಿ ಎರಡು ದಿನಗಳ ರಾಜ್ಯಪಾಲರ ಸಮ್ಮೇಳನ ಆರಂಭ

ರಾಷ್ಟ್ರಪತಿ ಭವನದಲ್ಲಿ ಇಂದಿನಿಂದ ಎರಡು ದಿನಗಳ ರಾಜ್ಯಪಾಲರ ಸಮ್ಮೇಳನ ಆರಂಭವಾಗಿದೆ.ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರಮೋದಿ ಸೇರಿದಂತೆ ಹಲವು ಗಣ್ಯರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ರಾಷ್ಟ್ರಪತಿ ಭವನದಲ್ಲಿ ಎರಡು ದಿನಗಳ ರಾಜ್ಯಪಾಲರ ಸಮ್ಮೇಳನ ಆರಂಭ
ರಾಜ್ಯಪಾಲರ ಸಮ್ಮೇಳನದ ಚಿತ್ರ
Published On :
ನವದೆಹಲಿ:ರಾಷ್ಟ್ರಪತಿ ಭವನದಲ್ಲಿ ಇಂದಿನಿಂದ ಎರಡು ದಿನಗಳ ರಾಜ್ಯಪಾಲರ ಸಮ್ಮೇಳನ ಆರಂಭವಾಗಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರಮೋದಿ ಸೇರಿದಂತೆ ಹಲವು ರಾಜ್ಯಗಳ ರಾಜ್ಯಪಾಲರು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗೌರ್ನರ್ ಗಳು ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
1949ರಲ್ಲಿ  ರಾಷ್ಟ್ರಪತಿ ಭವನದಲ್ಲಿ ಮೊದಲ ರಾಜ್ಯಪಾಲರ ಸಮ್ಮೇಳನ ನಡೆದಿತ್ತು. ಅಂದಿನ ಗೌರ್ನರ್ ಜನರಲ್ ಸಿ. ರಾಜಗೋಪಾಲಚಾರಿ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
ಎರಡನೇ ಅಧಿವೇಶನದಲ್ಲಿ ಭಾರತ ಸರ್ಕಾರದ ಪ್ರಮುಖ ಕಾರ್ಯಕ್ರಮಗಳು ಹಾಗೂ ಆಂತರಿಕ ಭದ್ರತೆ ಸಂಬಂಧ ಚರ್ಚೆ ನಡೆಯಲಿದೆ. ನೀತಿ ಆಯೋಗದ  ಉಪಾಧ್ಯಕ್ಷರು ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರರು ವಿಚಾರ ಮಂಡನೆ ಮಾಡಲಿದ್ದಾರೆ.
ಈ ಮಧ್ಯೆ ಮೂರನೇ ಅಧಿವೇಶನದಲ್ಲಿ  ರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿನ ಉನ್ನತ ಶಿಕ್ಷಣ ಹಾಗೂ ಕೌಶಾಲ್ಯಾಭಿವೃದ್ದಿ  ವಿಷಯದ ಬಗ್ಗೆ ಚರ್ಚೆ ನಡೆಯಲಿದೆ. ಗುಜರಾತ್ ರಾಜ್ಯಪಾಲರು ಈ ಅಧಿವೇಶನದ ಸಂಚಾಲಕರಾಗಿದ್ದಾರೆ.  ಉನ್ನತ ಶಿಕ್ಷಣ ಕಾರ್ಯದರ್ಶಿ ಹಾಗೂ ಕೈಗಾರಿಕಾ ನೀತಿ ಮತ್ತು ಉತ್ತೇಜನ ಇಲಾಖೆ ಕಾರ್ಯದರ್ಶಿ ವಿಚಾರ ಮಂಡನೆ ಮಾಡಲಿದ್ದಾರೆ.
ಐದನೇ ಅಧಿವೇಶನದಲ್ಲಿ  ಮಹಾತ್ಮಗಾಂಧಿ ಅವರ 150ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಅವರ ಚಿಂತನೆಗಳನ್ನು ಹೇಗೆ ನೆನಪಿನಲ್ಲಿಡಬಹುದು ಎಂಬ ಚರ್ಚೆ ನಡೆಯಲಿದ್ದು,  ಗ್ರಾಮ ಸ್ವರಾಜ್ ಅಭಿಯಾನ, ಮತ್ತು ಸ್ವಚ್ಛತಾ ಇಂಟರ್ನ್ ಶಿಪ್ ಬಗ್ಗೆ  ರಾಜ್ಯಪಾಲರು, ಲೆಪ್ಟಿನೆಂಟ್ ಗೌರ್ನರ್ ಗಳು ಸಲಹೆ ನೀಡಲಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರು ಇದರ ಸಂಚಾಲಕರಾಗಿದ್ದಾರೆ.
ಆರನೇ ಅಧಿವೇಶನದಲ್ಲಿ ಪ್ರಮುಖ ಕಾರ್ಯಕ್ರಮಗಳ ಬಗ್ಗೆ ವಿಷಾಯಾಧಾರಿತ ಚರ್ಚೆ ನಡೆಯಲಿದೆ. ಸಮಾರೋಪ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಧಾನಿ ನರೇಂದ್ರಮೋದಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.