ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ಪಿ.ಚಿದಂಬರಂಗೆ ನಿರೀಕ್ಷಣಾ ಜಾಮೀನು, ಜುಲೈ 10ರವರೆಗೂ ಬಂಧನವಿಲ್ಲ
ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ವಿತ್ತ ಸಚಿವ ಪಿ ಚಿದಂಬರಂ ಅವರಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

Published On :
ನವದೆಹಲಿ: ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ವಿತ್ತ ಸಚಿವ ಪಿ ಚಿದಂಬರಂ ಅವರಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ ಪಿ ಚಿದಂಬರಂ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನಲೆಯಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಪಿ ಚಿದಂಬರಂ ನಿರೀಕ್ಷಣಾ ಜಾಮಿನು ಕೋರಿ ದೆಹಲಿಯ ಪಾಟಿಯಾಲಾ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಪಾಟಿಯಾಲಾ ಕೋರ್ಟ್ ಚಿದಂಬರಂಗೆ ಜುಲೈ 10ರವರೆಗೂ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಮಾಜಿ ವಿತ್ತಸಚಿವ ಪಿ. ಚಿದಂಬರಂ ವಿರುದ್ಧ ತರಾತುರಿಯ ಕ್ರಮ ಕೈಗೊಳ್ಳದಂತೆ ಕೋರ್ಟ್ ತನಿಖಾ ಸಂಸ್ಥೆಗೆ ಸೂಚಿಸಿದೆ. ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಚಿದಂಬರಂ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಹೀಗಾಗಿ ಬಂಧನ ಭೀತಿ ಎದುರಿಸುತ್ತಿದ್ದ ಚಿದಂಬರಂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiP ChidambaramAircel-Maxis caseಪಿ.ಚಿದಂಬರಂPatiala Courtಏರ್ಸೆಲ್-ಮ್ಯಾಕ್ಸಿಸ್ ಪ್ರಕರಣಪಾಟಿಯಾಲಾ ಕೋರ್ಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


