ಬಿಟ್ ಕಾಯಿನ್ ಹಗರಣ: ಇಡಿಯಿಂದ ನಟಿ ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾ ವಿಚಾರಣೆ
ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತನಿಖೆಗಾಗಿ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೊಳಪಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತನಿಖೆ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೊಳಪಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈಯ ಜಾರಿನಿರ್ದೇಶನಾಲಯ ಕಚೇರಿಯಲ್ಲಿ ರಾಜ್ ಕುಂದ್ರಾ ಅವರಿಗೆ ಸಮನ್ಸ್ ಜಾರಿ ಮಾಡಿ, ಸರ್ಕಾರದಿಂದ ಕಾನೂನು ಬಾಹಿರ ಎಂದು ಘೋಷಿಸಲ್ಪಟ್ಟ ವ್ಯಾಪಾರದಲ್ಲಿ ಅವರ ಪಾತ್ರ ಕುರಿತಂತೆ ವಿಚಾರಣೆ ನಡೆಸಲಾಗಿದೆ.
ಪ್ರಕರಣದ ನಿದರ್ಶನಗಳು ರಾಜ್ ಕುಂದ್ರಾಗೆ ಸಂಬಂಧಿಸಿದ್ದಾಗಿದ್ದು, ಅವರ ಹೇಳಿಕೆಯನ್ನು ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬಿಟ್ ಕಾಯಿನ್ ಆಧಾರಿತ ಗೇಯಿನ್ ಬಿಟ್ ಕಾಯಿನ್ ವೆಬ್ ಸೈಟ್ ಹಾಗೂ ಅದರ ಸ್ಥಾಪಕ ಅಮಿತ್ ಭಾರಾದ್ವಾಜ್ ಮತ್ತಿತರ ಎಂಟು ಮಂದಿ ವಿರುದ್ಧ ಜಾರಿ ನಿರ್ದೇಶನಾಲಯ ಕೇಲ ದಿನಗಳ ಹಿಂದೆ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕ್ರಿಮಿನಲ್ ಕೇಸ್ ದಾಖಲಿಸಿತ್ತು.
ಈ ಹಗರಣದಲ್ಲಿ ಸುಮಾರು 8 ಸಾವಿರ ಹೂಡಿಕೆದಾರರು 2 ಸಾವಿರ ಕೋಟಿ ರೂಪಾಯಿ ಹಣ ಕಳೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣ ಸಂಬಂಧ ಮಹಾರಾಷ್ಟ್ರ ಪೊಲೀಸರು ದಾಖಲಿಸಿದ್ದ ಎಫ್ ಐಆರ್ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ದೂರು ದಾಖಲಿಸಿಕೊಂಡಿತ್ತು. ಪುಣೆ ಪೊಲೀಸರು ಬಾರಾದ್ವಾಜ್ ಹಾಗೂ ಆತನ ಸಹೋದರ ವಿವೇಕ್ ಅವರನ್ನು ದೆಹಲಿಯಲ್ಲಿ ಬಂಧಿಸಿದ್ದರು.
ಭಾರತದಲ್ಲಿ ವರ್ಚುವಲ್ ಕರೆನ್ಸಿಗಳನ್ನು ನಿಯಂತ್ರಿಸುವ ಯಾವುದೇ ನಿಯಮಗಳು ಇಲ್ಲ ಮತ್ತು ಆರ್ ಬಿಐ ಅಂತಹ ಕರೆನ್ಸಿಗಳನ್ನು ನಿರ್ವಹಿಸಲು ಯಾವುದೇ ಘಟಕದ / ಕಂಪನಿಗೆ ಯಾವುದೇ ಪರವಾನಗಿಯನ್ನು ನೀಡಿಲ್ಲ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಸಂಸತ್ತಿನಲ್ಲಿ ಕಳೆದ ವರ್ಷ ತಿಳಿಸಿದ್ದರು.
ಬಿಟ್ ಕಾಯಿನ್ ನಂತಹ ವರ್ಚುವಲ್ ಕರೆನ್ಸಿಗಳ ಬಗ್ಗೆ ಎಚ್ಚರದಿಂದಿರಲು ಹೂಡಿಕೆದಾರರನ್ನು ಸರ್ಕಾರ ಎಚ್ಚರಿಸಿದೆ, ಅವುಗಳು ಯಾವುದೇ ಕಾನೂನು ರಕ್ಷಣೆಯಿಲ್ಲದ ನಕಲಿ ಯೋಜನೆಗಳಾಗಿವೆ ಎಂದು ಅವರು ಹೇಳಿಕೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


