ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕೆಂದರೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲೇಬೇಕು; ಮಹಂತ ಪರಮಹಂಸ ದಾಸ್
2019ರಲ್ಲಿ ಮತ್ತೆ ಅಧಿಕಾರಕ್ಕೆ ಬರಬೇಕೆಂದು ಬಿಜೆಪಿ ಬಯಸುವುದೇ ಆದರೆ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲೇಬೇಕು ಎಂದು ರಾಮಜನ್ಮಭೂಮಿ ನ್ಯಾಸದ ಮುಖಂಡ ಮಹಂತ ಪರಮಹಂಸ ರಾಮಚಂದ್ರ ದಾಸ್ ಅವರು ಮಂಗಳವಾರ ಹೇಳಿದ್ದಾರೆ...

Published On :
ಲಖನೌ: 2019ರಲ್ಲಿ ಮತ್ತೆ ಅಧಿಕಾರಕ್ಕೆ ಬರಬೇಕೆಂದು ಬಿಜೆಪಿ ಬಯಸುವುದೇ ಆದರೆ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲೇಬೇಕು ಎಂದು ರಾಮಜನ್ಮಭೂಮಿ ನ್ಯಾಸದ ಮುಖಂಡ ಮಹಂತ ಪರಮಹಂಸ ರಾಮಚಂದ್ರ ದಾಸ್ ಅವರು ಮಂಗಳವಾರ ಹೇಳಿದ್ದಾರೆ.
ಕೇಂದ್ರ ಅಲ್ಪಸಂಖ್ಯಾತ ಖಾತೆ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿಯವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕೆಂದು ಬಯಸುತ್ತಿರುವುದೇ ಆದರೆ, ಅಯೋಧ್ಯೆಯಲ್ಲಿ ರಾಮ ಮಂದಿನ ನಿರ್ಮಾಣ ಮಾಡಬೇಕು. ಒಂದು ವೇಳೆ ಇದರಲ್ಲಿ ವಿಫಲವಾಗಿದ್ದೇ ಆದರೆ, ಮುಂಬರುವ ಚುನಾವಣೆಯಲ್ಲಿ ಸೋಲು ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಅಯೋಧ್ಯೆಯಲ್ಲಿ ಬಿಜೆಪಿ ರಾಮ ಮಂದಿರ ನಿರ್ಮಾಣ ಮಾಡಲೇ ಹೋದರೆ, ಬಿಜೆಪಿ ವಿರುದ್ಧ ಚಳುವಳಿ ಸಂಘಟಿಸಿ ಖಂಡಿತವಾಗಿಯೂ ಸೋಲು ಕಾಣುವಂತೆ ಮಾಡುತ್ತೇವೆಂದು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿಯವರು, 2019ರಲ್ಲಿ ಪ್ರಧಾನಮಂತ್ರಿ ಹುದ್ದೆ ಖಾಲಿಯಿರುವುದಿಲ್ಲಪ. ದೇಶದ ಜನತೆಯ ಅಭ್ಯುದಯದ ದೃಷ್ಟಿಯಿಂದ ಕೈಗೊಂಡಿರುವ ಅಭಿವೃದ್ಧಿ ಕಾರ್ಯದಿಂದಾಗಿ ಪ್ರಧಾನಿ ಮೋದಿ ಮತ್ತೊಮ್ಮೆ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದಾರೆ. ಬಿಜೆಪಿಯು 2019ರ ಚುನಾವಣೆಯಲ್ಲಿ ಅಭಿವೃದ್ಧಿ, ಅಭಿವೃದ್ಧಿ, ಅಭಿವೃದ್ಧಿ ವಿಷಯವನ್ನೇ ಮುಂದಿಟ್ಟುಕೊಂಡು ಹೋರಾಟ ನಡೆಸಲಿದೆ. ಹಿಂದುತ್ವ ಮತ್ತು ಮಂದಿರ ವಿಚಾರಗಳಲ್ಲಿ ಇಲ್ಲಿ ಅವಕಾಶವಿಲ್ಲ. ದೇಶದಲ್ಲಿ ಅಲ್ಪಸಂಖ್ಯಾತರು ಸುರಕ್ಷಿತವಾಗಿದ್ದಾರೆಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿRam MandirAyodhyaಅಯೋಧ್ಯೆಅಧಿಕಾರರಾಮ ಮಂದಿರPower2019 ಲೋಕಸಭಾ ಚುನಾವಣೆ2019 Lok Sabha electionMahant Paramhans Dasಮಹಂತ ಪರಮಹಂಸ ರಾಮಚಂದ್ರ ದಾಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


