ಹೃದಯ ವಿದ್ರಾವಕ: ತಾಯಿಯ ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಮಗ ಸಾವು!
ತಾಯಿಯ ಅಂತಿಮ ದರ್ಶನ ಪಡೆದು ಅಂತ್ಯಕ್ರಿಯೆಯಲ್ಲಿ ಭಾಗಿಯಾಗುವ ಸಲುವಾಗಿ ತೆರಳುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಮಗ ದಾರುಣ ಸಾವನ್ನಪ್ಪಿರುವ...

Published On :
ಹೈದರಾಬಾದ್: ತಾಯಿಯ ಅಂತಿಮ ದರ್ಶನ ಪಡೆದು ಅಂತ್ಯಕ್ರಿಯೆಯಲ್ಲಿ ಭಾಗಿಯಾಗುವ ಸಲುವಾಗಿ ತೆರಳುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಮಗ ದಾರುಣ ಸಾವನ್ನಪ್ಪಿರುವ ದಾರುಣ ಘಟನೆ ಹೈದರಾಬಾದ್ ನಲ್ಲಿ ಸಂಭವಿಸಿದೆ.
ಇನ್ಫೋಸಿಸ್ ನಲ್ಲಿ ಉದ್ಯೋಗಿ 32 ವರ್ಷದ ಅರುಮಿಲ್ಲಿ ವೀರಾ ವೆಂಕಟ ಸತ್ಯನಾರಾಯಣ ಮೃತ ದುರ್ದೈವಿ. ಸತ್ಯನಾರಾಯಣ ಅವರು ನಾದಿನಿ ಜೊತೆ ಕ್ಯಾಬ್ ನಲ್ಲಿ ಕೊಡದ್ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಬರುತ್ತಿದ್ದಾಗ ಕಾರಿಗೆ ಟ್ರಕ್ ಡಿಕ್ಕಿ ಹೊಡಿದಿದ್ದು ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಕ್ಯಾಬ್ ಚಾಲಕ ಕೆ ರಾಜೇಶ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ.
ಮೃತ ಸತ್ಯನಾರಾಯಣ ಪತ್ನಿ ವೆಂಕಟ ಸೌಜನ್ಯ ಅವರು ಗರ್ಭಿಣಿಯಾಗಿದ್ದು ಪತಿ ಹಾಗೂ ತಂಗಿಯ ಸಾವಿನ ಶೋಕ ಸಾಗರದಲ್ಲಿ ಮುಳುಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


