ದೇಶ

ರಫೇಲ್ ಒಪ್ಪಂದದಲ್ಲಿ ಯಾವುದೇ ಹಗರಣಗಳೂ ನಡೆದಿಲ್ಲ; ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್

ರಫೇಲ್ ಒಪ್ಪಂದದಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಆಧಾರ ರಹಿತವಾದದ್ದು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಹೇಳಿದ್ದಾರೆ...

ರಫೇಲ್ ಒಪ್ಪಂದದಲ್ಲಿ ಯಾವುದೇ ಹಗರಣಗಳೂ ನಡೆದಿಲ್ಲ; ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್
Published On :
ನವದೆಹಲಿ; ರಫೇಲ್ ಒಪ್ಪಂದದಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಆಧಾರ ರಹಿತವಾದದ್ದು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಹೇಳಿದ್ದಾರೆ. 
ಆರೋಪಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ರಫೇಲ್ ಒಪ್ಪಂದದಲ್ಲಿ ಯಾವುದೇ ರೀತಿಯ ಅಕ್ರಮಗಳೂ ನಡೆದಿಲ್ಲ. ಆರೋಪಗಳು ಆಧಾರ ರಹಿತವಾದದ್ದು ಎಂದು ಹೇಳಿದ್ದಾರೆ. 
ಇದೇ ವೇಳೆ ರಕ್ಷಣಾ ಇಲಾಖೆಯಲ್ಲಿ ಶಸ್ತ್ರಾಸ್ತ್ರಗಳ ಅಭಾವವಿದೆ ಎಂಬ ಆರೋಪಗಳನ್ನು ತಳ್ಳಿಹಾಕಿದ್ದಾರೆ. 
ಒಂದೆಡೆ ಸಾವಿರಾರು ಕೋಟಿ ವೆಚ್ಚ ಮಾಡಿ ವಿದೇಶಗಳಿಂದ ಅತ್ಯಾಧುನಿಕ ಶಸ್ತ್ರಾಸ್ತ್ರ ಖರೀದಿಸುತ್ತಿರುವ ಸರ್ಕಾರ, ಮತ್ತೊಂದೆಡೆ ಸೈನಿಕರಿಗೆ ಸೇನಾ ಸಮವಸ್ತ್ರ ಖರೀದಿಸಲೂ ಹಣವಿಲ್ಲದ ಸ್ಥಿತಿ ತಲುಪಿದೆ ಎಂಬ ಗಂಭೀರ ಆರೋಪಗಳು ಈ ಹಿಂದೆ ಕೇಳಿ ಬಂದಿದ್ದವು. 
ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ತುರ್ತು ಶಸ್ತ್ರಾಸ್ತ್ರ ಖರೀದಿಗೆ ಹೆಚ್ಚುವರಿ ಹಣ ಒದಗಿಸಿಲ್ಲ ಹೀಗಾಗಿ ಸರ್ಕಾರಿ ಸಶಸ್ತ್ರ ಕಾರ್ಖಾನೆಗಳಿಂದ ಸೇನೆಗೆ ಪೂರೈಕೆ ಪ್ರಮಾಣವನ್ನು ಶೇ.94ರಿಂದ ಶೇ.50ಕ್ಕೆ ಇಳಿಸಲಾಗಿದೆ. ಈ ಹಣವನ್ನು ತುರ್ತು ಸಮಯಕ್ಕೆ ಬೇಕಾದ ಶಸ್ತ್ರಾಸ್ತ್ರ ಖರೀದಿಗೆ ಬಳಸಲು ಸೇನೆ ನಿರ್ಧರಿಸಿದೆ. ಹೀಗೆ ಹಣಕಾಸಿನ ನೆರವಿನ ಕಡಿತದ ಪರಿಣಾಮ ಯೋಧರು ತಮ್ಮ ಸಮವಸ್ತ್ರ ಟೋಪಿ, ಬೆಲ್ಟ್'ಗಳು, ಶೂಗಳನ್ನು ತಾವೇ ಖರೀದಿಸಬೇಕಾಗಿದೆ. ಕೆಲವು ವಾಹನಗಳ ಬಿಡಿಭಾಗಗಳ ಖರೀದಿಗೂ ಸೇನೆಯಲ್ಲಿ ಅನುದಾನದ ಕೊರತೆಗಳಿವೆ ಎಂದು ಖಾಸಗಿ ಪತ್ರಿಕೆಯೊಂದು ವರದಿ ಮಾಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.