ಉತ್ತರ ಪ್ರದೇಶದಿಂದ ಪತಂಜಲಿ ಫುಡ್ ಪಾರ್ಕ್ ಯೋಜನೆ ಸ್ಥಳಾಂತರ: ಯೋಗಿ ಸರ್ಕಾರದ ಬಗ್ಗೆ ಬಾಬಾ ಅಸಮಾಧಾನ!
ಉತ್ತರ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದ ಪತಂಜಲಿ ಫುಡ್ ಪಾರ್ಕ್ ಯೋಜನೆಯನ್ನು ಸ್ಥಳಾಂತರಿಸಲು ಪತಂಜಲಿ ನಿರ್ಧರಿಸಿದೆ.

Published On :
ನವದೆಹಲಿ: 2019 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಬೆಂಬಲ ನೀಡುವಂತೆ ಕೋರಲು ಜೂ.04 ರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪತಂಜಲಿ ಸಂಸ್ಥೆಯ ಸಂಸ್ಥಾಪಕ ಬಾಬಾ ರಾಮ್ ದೇವ್ ಅವರೊಂದಿಗೆ ಚರ್ಚೆ ನಡೆಸಿದ್ದರು. ಈ ಬೆನ್ನಲ್ಲೆ ಉತ್ತರ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದ ಪತಂಜಲಿ ಫುಡ್ ಪಾರ್ಕ್ ಯೋಜನೆಯನ್ನು ಸ್ಥಳಾಂತರಿಸಲು ಪತಂಜಲಿ ನಿರ್ಧರಿಸಿದೆ.
ಗ್ರೇಟರ್ ನೊಯ್ದಾ ಪ್ರದೇಶದಲ್ಲಿ ಸುಮಾರು 450 ಎಕರೆ ಪ್ರದೇಶದಲ್ಲಿ 2000 ಕೋಟಿ ರೂ ವೆಚ್ಚದಲ್ಲಿ ಫುಡ್ ಪಾರ್ಕ್ ನ್ನು ನಿರ್ಮಿಸಲು ಪತಂಜಲಿ ಸಂಸ್ಥೆ ನಿರ್ಧಾರಿಸಿತ್ತು. ಇದಕ್ಕಾಗಿ ನವೆಂಬರ್ 2016 ರಲ್ಲಿ ಅಖಿಲೇಶ್ ಯಾದವ್ ಸರ್ಕಾರ ಪತಂಜಲಿ ಸಂಸ್ಥೆಗೆ ಉಅಮುನಾ ಎಕ್ಸ್ ಪ್ರೆಸ್ ವೇ ಬಳಿ 450 ಎಕರೆ ಭೂಮಿಯನ್ನೂ ಮಂಜೂರು ಮಾಡಿತ್ತು. ಈ ನಡುವೆ ಯೋಜನೆ ಜಾರಿಯಾಗುವುದಕ್ಕೂ ಮುನ್ನ ಯೋಗಿ ಆದಿತ್ಯನಾಥ್ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಉತ್ತರ ಪ್ರದೇಶ ಸರ್ಕಾರ ಯೋಜನೆ ಬಗ್ಗೆ ಉದಾಸೀನತೆ ತೋರುತ್ತಿದೆ ಎಂದು ಪಿಎಎಲ್ ಎಂಡಿ ಆಚಾರ್ಯ ಬಾಲಕೃಷ್ಣ ಆರೋಪಿಸಿ, ಪತಂಜಲಿ ಸಂಸ್ಥೆ ಪ್ರಸ್ತಾವಿತ ಯೋಜನೆಯನ್ನು ಉತ್ತರ ಪ್ರದೇಶದಿಂದ ಸ್ಥಳಾಂತರಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಯೋಗಿ ಆದಿತ್ಯನಾಥ್ ಸರ್ಕಾರ ಹೂಡಿಕೆ ಆಕರ್ಷಣೆಯಲ್ಲಿ ಹಿಂದೆಬಿದ್ದಿದೆ ಎಂಬ ಆರೋಪ ಕೇಳಿಬಂದಿರುವ ಸಂದರ್ಭದಲ್ಲೇ ಪತಂಜಲಿ ಸಂಸ್ಥೆ ಸಹ 2000 ಕೋಟಿ ರೂ ಮೌಲ್ಯದ ಯೋಜನೆಯನ್ನು ಉತ್ತರ ಪ್ರದೇಶದಿಂದ ಸ್ಥಳಾಂತರಿಸಲು ಮುಂದಾಗಿರುವುದು ಯೋಗಿ ಸರ್ಕಾರಕ್ಕೆ ಮುಜುಗರ ಉಂಟುಮಾಡಿದೆ.
ಆದರೆ ಪತಂಜಲಿ ಸಂಸ್ಥೆಯ ಆರೋಪವನ್ನು ನಿರಾಕರಿಸಿರುವ ಸರ್ಕಾರದ ವಕ್ತಾರರು " 450 ಭೂಮಿಯನ್ನು ಇಬ್ಭಾಗ ಮಾಡಿ 400 ಎಕರೆಯನ್ನು ಗ್ರೇಟರ್ ನೋಯ್ಡಾ ಬಳಿ ನೀಡಿ ಉಳಿದ 50 ಎಕರೆಯನ್ನು ಬೇರೆಡೆ ನೀಡಲು ಸಂಸ್ಥೆ ಒತ್ತಾಯಿಸುತ್ತಿತ್ತು, ಆದರೆ ಸರ್ಕಾರ ಇದಕ್ಕೆ ಒಪ್ಪಲಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


