ತಮಿಳುನಾಡು: ನೀಟ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
ನೀಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲಿಲ್ಲವೆಂದು ಬೇಸರಗೊಂಡು 17 ವರ್ಷದ ವಿದ್ಯಾರ್ಥಿನಿ ಇಲಿ ...

ಚೆನ್ನೈ: ನೀಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲಿಲ್ಲವೆಂದು ಬೇಸರಗೊಂಡು 17 ವರ್ಷದ ವಿದ್ಯಾರ್ಥಿನಿ ಇಲಿ ಪಾಷಾಣವನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಗಿಂಜಿಯಲ್ಲಿ ಕಳೆದ ರಾತ್ರಿ ನಡೆದಿದೆ.
ವೈದ್ಯಕೀಯ ಕೋರ್ಸ್ ಓದುವ ಹಂಬಲದಲ್ಲಿದ್ದ ಪ್ರತಿಭಾ 12ನೇ ತರಗತಿ ಪರೀಕ್ಷೆಯಲ್ಲಿ 1200 ಅಂಕಗಳಿಗೆ 1125 ಅಂಕಗಳನ್ನು ಪಡೆದಿದ್ದಳು. ಆದರೆ ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿತೆಂದು ತೀವ್ರ ದುಃಖಿತಳಾಗಿದ್ದಳು. ಇದರಿಂದ ತನ್ನ ಮನೆಯಲ್ಲಿ ಇಲಿ ಪಾಷಾಣವನ್ನು ನಿನ್ನೆ ಸೇವಿಸಿದ್ದಳು. ಅಸ್ವಸ್ಥಗೊಂಡು ಕುಸಿದುಬಿದ್ದ ಪ್ರತಿಭಾಳನ್ನು ತಿರುವಣ್ಣಮಲೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಇಂದು ಶವಪರೀಕ್ಷೆ ನಡೆಸಿದ ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಬಡ ಕುಟುಂಬದಿಂದ ಬಂದಿರುವ ಪ್ರತಿಭಾಳ ತಂದೆ ಕೂಲಿ ಕಾರ್ಮಿಕರಾಗಿದ್ದರೆ ತಾಯಿ ಕೃಷಿ ಕಾರ್ಮಿಕಳು.
ಪ್ರತಿಭಾಳ ನಿಧನಕ್ಕೆ ನಟ ರಜನಿಕಾಂತ್ ಸಂತಾಪ ಸೂಚಿಸಿದ್ದಾರೆ. ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.
ಕಳೆದ ವರ್ಷ ಕೂಡ ಎಸ್ ಅನಿತಾ ಎಂಬ ವಿದ್ಯಾರ್ಥಿನಿ ನೀಟ್ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡದ್ದಕ್ಕೆ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


