ಇಶ್ರತ್ ಜಹಾನ್ ಪ್ರಕರಣ: ಪ್ರಧಾನಿ ಮೋದಿ ಬಂಧಿಸಲು ಸಿಬಿಐ ಉದ್ದೇಶಿಸಿತ್ತು; ಮಾಜಿ ಡಿಐಜಿ ಸ್ಫೋಟಕ ಮಾಹಿತಿ
ಇಶ್ರತ್ ಜಹಾನ್ ನಕಲಿ ಎನ್'ಕೌಂಟರ್ ಆರೋಪ ಪ್ರಕರಣ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಬಂಧನಕ್ಕೊಳಪಡಿಸಲು ಸಿಬಿಐ ಬಯಸಿತ್ತು ಎಂಬ ಸ್ಫೋಟಕ ಮಾಹಿತಿ ಇದೀಗ ಬಹಿರಂಗಗೊಂಡಿದೆ...

Published On :
ಅಹಮದಾಬಾದ್: ಇಶ್ರತ್ ಜಹಾನ್ ನಕಲಿ ಎನ್'ಕೌಂಟರ್ ಆರೋಪ ಪ್ರಕರಣ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಬಂಧನಕ್ಕೊಳಪಡಿಸಲು ಸಿಬಿಐ ಬಯಸಿತ್ತು ಎಂಬ ಸ್ಫೋಟಕ ಮಾಹಿತಿ ಇದೀಗ ಬಹಿರಂಗಗೊಂಡಿದೆ.
ಇಶ್ರತ್ ಜಹಾನ್ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಾಜಿ ಡಿಐಜಿ ವಂಝಾರಾ ಅವರು ನ್ಯಾಯಾಲಯದ ಮುಂದೆ ಈ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.
ಇಶ್ರತ್ ಜಹಾನ್ ಪ್ರಕರಣದಲ್ಲಿ ಅಂದಿನ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಹಾಗೂ ಗೃಹ ಸಚಿವರಾಗಿದ್ದ ಅಮಿತ್ ಶಾ ಅವರನ್ನು ಬಂಧಿಸಲು ಸಿಬಿಐ ನಿರ್ಧರಿಸಿದ್ದು ಎಂದು ವಂಜಾರಾ ಅವರು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಇಶ್ರತ್ ಜಹಾನ್ ಪ್ರಕರಣದಿಂದ ತಮ್ಮ ಹೆಸರನ್ನು ಕೈ ಬಿಡುವಂತೆ ಕೋರಿ ವಂಝಾರಾ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಕುರಿತ ವಿಚಾರಣೆ ವೇಲೆ ವಂಝಾರಾ ಅವರು ಈ ರೀತಿಯ ಹೇಳಿಕೆಯನ್ನು ನೀಡಿದ್ದು, ವಂಝಾರಾ ಅವರ ಹೇಳಿಕೆ ಇದೀಗ ಭಾರೀ ಸಂಚಲನವನ್ನು ಮೂಡಿಸಿದೆ.
ಮೋದಿ ಹಾಗೂ ಅಮಿತ್ ಶಾ ಅವರನ್ನು ಸಿಬಿಐ ಬಂಧಿಸಲು ನಿರ್ಧರಿಸಿತ್ತು. ಆದರೆ, ಅದೃಷ್ಟವಶಾತ್ ಬಂಧಿಸಿರಲಿಲ್ಲ ಎಂದು ತಿಳಿಸಿದ್ದಾರೆ.
ಸಾಕ್ಷ್ಯಾಧಾರ ಕೊರೆತೆ ಹಿನ್ನಲೆಯಲ್ಲಿ 2014ರಲ್ಲಿ ಸಿಬಿಐ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರಿಗೆ ಕ್ಲೀನ್ ಚಿಟ್ ನೀಡಿತ್ತು. ಆದರೆ, ಪೊಲೀಸ್ ಅಧಿಕಾರಿಗಳ ವಿರುದ್ಧದ ವಿಚಾರಣೆ ಇನ್ನೂ ನ್ಯಾಯಾಲಯದಲ್ಲಿದೆ.
ಈ ಹಿಂದೆ ವಂಝಾರಾ ಅವರು ಮೋದಿ ಕುರಿತು ನ್ಯಾಯಾಲಯಕ್ಕೆ ದಾಖಲೆಗಳನ್ನು ಸಲ್ಲಿಸಿದ್ದರು. ಮೋದಿಯವರು ಗುಜರಾತ್ ರಾಜ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಹಸ್ಯವಾಗಿ ಪ್ರಕರಣದ ಬಗ್ಗೆ ಅವರನ್ನು ವಿಚಾರಣಾ ದೃಷ್ಟಿಯಿಂದ ಪ್ರಶ್ನಿಸಲಾಗಿದ್ದು ಎಂದು ದಾಖಲೆ ಸಲ್ಲಿಸಿದ್ದರು.
2004ರ ಜೂನ್ ತಿಂಗಳಿನಲ್ಲಿ ಇಶ್ರತ್ ಜಹಾನ್ ಸೇರಿದಂತೆ ಒಟ್ಟು ನಾಲ್ವರನ್ನು ಶಂಕಿತ ಉಗ್ರರೆಂದು ಎನ್ ಕೌಂಟರ್ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿAmit ShahFake Encounterಅಮಿತ್ ಶಾಗುಜರಾತ್ ಗಲಭೆGujarat riotsIshrat Jahanformer DIGಇಶ್ರತ್ ಜಹಾನ್Vanzaraನಕಲಿ ಎನ್\'ಕೌಂಟರ್ಮಾಜಿ ಡಿಐಜಿವಂಝಾರಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


