ಜಮ್ಮು-ಕಾಶ್ಮೀರ: ಗಡಿ ನುಸುಳುತ್ತಿದ್ದ 3 ಉಗ್ರರನ್ನು ಸದೆಬಡಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಮಚಿಲ್ ಸೆಕ್ಟರ್ ಬಳಿ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ...

Published On :
ಶ್ರೀನಗರ; ಜಮ್ಮು ಮತ್ತು ಕಾಶ್ಮೀರದ ಮಚಿಲ್ ಸೆಕ್ಟರ್ ಬಳಿ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.
ಮಚಿಲ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಂದಿರುವ ಉಗ್ರರ ಗುಂಪೊಂದು ಗಡಿ ನುಸುಳಲು ಯತ್ನ ನಡೆಸುತ್ತಿತ್ತು.
ಗಡಿಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿರುವುದನ್ನು ಗಮನಿಸಿದ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಈ ವೇಳೆ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ. ಪ್ರಸ್ತುತ ಸ್ಥಳದಲ್ಲಿ ಸೇನೆ ತನ್ನ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಹತ್ಯೆಉಗ್ರರುterroristsಜಮ್ಮು ಮತ್ತು ಕಾಶ್ಮೀರJammu and Kashmirsecurity forcesಭದ್ರತಾ ಪಡೆKilledInfiltration bidMachhil sectorಗಡಿ ನುಸುಳುಮಚಿಲ್ ಸೆಕ್ಟಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


