2006ರ ಕಾಶ್ಮೀರ ಲೈಂಗಿಕ ಹಗರಣ: ಐವರಿಗೆ 10 ವರ್ಷ ಜೈಲು
2006 ರ ಜಮ್ಮು ಮತ್ತು ಕಾಶ್ಮೀರ ಲೈಂಗಿಕ ಹಗರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಬಿಎಸ್ ಡೆಪ್ಯುಟಿ ಇನ್ಸ್ ಪೆಕ್ಟರ್ ಸೇರಿದಂತೆ ಐವರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ.

Published On :
ಚಂಡೀಘರ: 2006 ರ ಜಮ್ಮು ಮತ್ತು ಕಾಶ್ಮೀರ ಲೈಂಗಿಕ ಹಗರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಬಿಎಸ್ ಡೆಪ್ಯುಟಿ ಇನ್ಸ್ ಪೆಕ್ಟರ್ ಸೇರಿದಂತೆ ಐವರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ.
ಚಂಡಿಘರದಲ್ಲಿನ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಗಗನ್ ಜಿತ್ ಕೌರ್ ಈ ತೀರ್ಪು ಪ್ರಕಟಿಸಿದ್ದಾರೆ.
ಮಾಜಿ ಬಿಎಸ್ ಎಫ್ ಡೆಪ್ಯುಟಿ ಇನ್ಸ್ ಪೆಕ್ಟರ್ ಕೆಸಿ ಪಂಡಿ, ಜಮ್ಮು ಕಾಶ್ಮೀರದ ಮಾಜಿ ಉಪ ಪೊಲೀಸ್ ಅಧೀಕ್ಷಕ ಮೊಹಮ್ಮದ್ ಅಶ್ರಫ್ ಮಿರ್ ಹಾಗೂ ಮೂವರು ಇತರರು ಶಿಕ್ಷೆಗೆ ಗುರಿಯಾಗಿದ್ದಾರೆ. ಪಂಡಿ ಹಾಗೂ ಅಶ್ರಫ್ ಮಿರ್ ಅವರುಗಳಿಗೆ ಶಿಕ್ಷೆ ಜತೆಗೆ ತಲಾ 1 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ.
ದಂಡ ಕಟ್ಟಲು ವಿಫಲವಾದಲ್ಲಿ ಅವರು ಮತ್ತೆ ಒಂದು ವರ್ಷಗಳ ಹೆಚ್ಚುವರಿ ಜೈಲು ವಾಸ ಶಿಕ್ಷೆಗೆ ಒಳಗಾಗಬೇಕಾಗುವುದು. ಇತರೆ ಮೂವರೂ ಸಹ 50,000 ರೂ. ದಂಡ ಪಾವತಿ ಮಾಡಬೇಕಿದ್ದು ಅವರು ದಂಡ ಕಟ್ಟಿಲ್ಲವಾದರೆ ಆರು ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕೆಂದು ನ್ಯಾಯಾಲಯ ಹೇಳಿದೆ.
ಕಳೆದ ಮೇ 30 ರಂದು ನ್ಯಾಯಾಲಯವು ಪ್ರಕರಣದಲ್ಲಿ ಭಾಗವಹಿಸಿದ್ದ ಈ ಐವರನ್ನು ದೋಷಿಗಳೆಂದು ಗುರುತಿಸಿತ್ತು. ಇದೇ ವೇಳೆ ಜಮ್ಮು ಕಾಶ್ಮೀರದ ಅಂದಿನ ಹೆಚ್ಚುವರಿ ಅಡ್ವೊಕೇಟ್ ಜನರಲ್ ಸೇರಿದಂತೆ ಇಬ್ಬರು ಆರೋಪಿಗಳನ್ನು ನ್ಯಾಯಾಲಯವು ಖುಲಾಸೆಗೊಳಿಸಿತು.
ಅಪ್ರಾಪ್ತ ಕಾಶ್ಮೀರಿ ಯುವತಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುವ ದೃಶ್ಯವನ್ನೊಳಗೊಂಡ ಎರಡು ಸಿಡಿಗಳನ್ನು 2006ರಲ್ಲಿ ಕಾಶ್ಮೀರದ ಪೋಲೀಸರು ವಶಕ್ಕೆ ಪಡೆದಾಗ ಬೃಹತ್ ಲೈಂಗಿಕ ಹಗರಣ ಬಯಲಾಗಿತ್ತು. ಅಪ್ರಾಪ್ತ ಯುವತಿಯರನ್ನು ಪೋಲೀಸ್ ಅಧಿಕಾರಿಗಳು, ರಾಜತಾಂತ್ರಿಕರು, ರಾಜಕಾರಣಿಗಳು ಸೇರಿ ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳುತ್ತಿರುವ ಘಟನೆ ದೇಶಾದ್ಯಂತ ಸುದ್ದಿಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CBIಸಿಬಿಐJammu Kashmirಜಮ್ಮು ಕಾಶ್ಮೀರSex scandalಲೈಂಗಿಕ ಹಗರಣBSF Deputy inspectorಬಿಎಸ್ಎಫ್ ಡೆಪ್ಯುಟಿ ಇನ್ಸ್ಪೆಕ್ಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


