ದೇಶ

ಕಾಶಿ ವಿಶ್ವನಾಥ ದೇವಸ್ಥಾನ ಸ್ಫೋಟಿಸುವುದಾಗಿ ಎಲ್ಇಟಿ ಬೆದರಿಕೆ

ಕಾಶಿ ವಿಶ್ವನಾಥ್ ದೇವಸ್ಥಾನ ಮತ್ತು ಕೃಷ್ಣ ಜನ್ಮಭೂಮಿ ಸ್ಫೋಟಿಸುವುದಾಗಿ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆ ಬೆದರಿಕೆ ಹಾಕಿರುವುದಾಗಿ ಉತ್ತರಪ್ರದೇಶ ಪೊಲೀಸರು...

ಕಾಶಿ ವಿಶ್ವನಾಥ ದೇವಸ್ಥಾನ ಸ್ಫೋಟಿಸುವುದಾಗಿ ಎಲ್ಇಟಿ ಬೆದರಿಕೆ
ಕಾಶಿ ವಿಶ್ವನಾಥ್ ದೇವಸ್ಥಾನ
Published On :
ಕಾಶಿ ವಿಶ್ವನಾಥ್ ದೇವಸ್ಥಾನ ಮತ್ತು ಕೃಷ್ಣ ಜನ್ಮಭೂಮಿ ಸ್ಫೋಟಿಸುವುದಾಗಿ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆ ಬೆದರಿಕೆ ಹಾಕಿರುವುದಾಗಿ ಉತ್ತರಪ್ರದೇಶ ಪೊಲೀಸರು ರಾಜ್ಯಾದ್ಯಂತ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ. 
ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ ಕಮಾಂಡೆರ್ ಮೌಲಾನಾ ಅಂಬು ಶೇಖ್ ಕಳೆದ ತಿಂಗಳು ನೈರುತ್ಯ ರೈಲ್ವೇ ಗೆ ಪತ್ರ ರವಾನಿಸಿದ್ದು ಈ ಸಂಬಂಧ ಉತ್ತರಪ್ರದೇಶ ಪೊಲೀಸರು ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿದ್ದಾರೆ. 
ಮೇ 29ರಂದು ದೆಹಲಿಯ ನೈರುತ್ಯ ರೈಲ್ವೆ ಈ ಪತ್ರವನ್ನು ಸ್ವಿಕರೀಸಿದ್ದು ಪತ್ರದಲ್ಲಿ ಶಹಾನಪುರ ಮತ್ತು ಹಪುರ್ ಸೇರಿದಂತೆ ಹಲವು ರೈಲು ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದೆ. 
ಜೂನ್ 8-10ರಂದು ಕೃಷ್ಣ ಜನ್ಮಭೂಮಿ ಮಥುರಾ ಮತ್ತು ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಸ್ಥಾನವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದಲ್ಲ ಮುಂಜಾಗೃತ ಕ್ರಮಗಳನ್ನು ಕೊಂಡಿದ್ದು ಕಟ್ಟೆಚ್ಚರ ವಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.