ದೇಶ

ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಲು ನಾಗ್ಪುರಕ್ಕೆ ತಲುಪಿದ ಪ್ರಣಬ್ ಮುಖರ್ಜಿ

ದೇಶಾದ್ಯಂತ ಬಹು ಚರ್ಚೆಗೆ ಗ್ರಾಸವಾಗಿದ್ದ ರಾಷ್ಟ್ರೀಯ ಸ್ವಯಂ ಸೇವಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಾಗ್ಪುರಕ್ಕೆ ತಲುಪಿಸಿದ್ದಾರೆ.

ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಲು ನಾಗ್ಪುರಕ್ಕೆ ತಲುಪಿದ ಪ್ರಣಬ್ ಮುಖರ್ಜಿ
ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಲು ನಾಗ್ಪುರಕ್ಕೆ ತಲುಪಿದ ಪ್ರಣಬ್ ಮುಖರ್ಜಿ
Published On :
ನಾಗ್ಪುರ: ದೇಶಾದ್ಯಂತ ಬಹು ಚರ್ಚೆಗೆ ಗ್ರಾಸವಾಗಿದ್ದ ರಾಷ್ಟ್ರೀಯ ಸ್ವಯಂ ಸೇವಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಾಗ್ಪುರಕ್ಕೆ ತಲುಪಿಸಿದ್ದಾರೆ. 
ಜೂ.07 ರಂದು ಆರ್ ಎಸ್ಎಸ್ ಕೇಂದ್ರ ಶಾಖೆಯಲ್ಲಿ ಆರ್ ಎಸ್ಎಸ್ ನ ಸಂಘ್ ಶಿಕ್ಷಾ ವರ್ಗ್ ಕಾರ್ಯಕ್ರಮ ನಡೆಯಲಿದ್ದು, ಇದರಲ್ಲಿ  ಮಾಜಿ ರಾಷ್ಟ್ರಪತಿಗಳೂ, ಕಾಂಗ್ರೆಸ್ ನ ನಾಯಕರೂ ಆಗಿದ್ದ ಪ್ರಣಬ್ ಮುಖರ್ಜಿ ಭಾಗವಹಿಸುತ್ತಿರುವುದು ಸೈದ್ಧಾಂತಿಕ ಕಾರಣಗಳಿಂದಾಗಿ ತೀವ್ರ ಚರ್ಚೆಯಾಗಿತ್ತು. 
ಜಾತ್ಯಾತೀತತೆಯ ಕಾರಣಗಳಿಂದಾಗಿ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗದಂತೆ ಕಾಂಗ್ರೆಸ್ ನಾಯಕರು ಪ್ರಣಬ್ ಮುಖರ್ಜಿ ಅವರಿಗೆ ಮನವಿ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಮುಖರ್ಜಿ ತಾವು ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದಕ್ಕೆ ವ್ಯಕ್ತವಾದ ಆಕ್ಷೇಪಕ್ಕೆ ನಾಗ್ಪುರದಲ್ಲೇ ಉತ್ತರಿಸುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ನಾಳಿನ ಕಾರ್ಯಕ್ರಮ ಕುತೂಹಲ ಮೂಡಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.