ಸರ್ಕಾರಿ ಅಧಿಕಾರಿಗಳಿಗಿಂತ ವೇಶ್ಯೆಯರೇ ಉತ್ತಮ: ಬಿಜೆಪಿ ಶಾಸಕ
ಸರ್ಕಾರಿ ಅಧಿಕಾರಿಗಳಿಗಿಂತ ವೇಶ್ಯೆಯರೇ ವಾಸಿ ಎಂದು ಉತ್ತರ ಪ್ರದೇಶ ಶಾಸಕರೊಬ್ಬರು ವಿವಾದಿತ ಹೇಳಿಕೆ ನೀಡಿದ್ದಾರೆ. ...

Published On :
ಉತ್ತರ ಪ್ರದೇಶ: ಸರ್ಕಾರಿ ಅಧಿಕಾರಿಗಳಿಗಿಂತ ವೇಶ್ಯೆಯರೇ ವಾಸಿ ಎಂದು ಉತ್ತರ ಪ್ರದೇಶ ಶಾಸಕರೊಬ್ಬರು ವಿವಾದಿತ ಹೇಳಿಕೆ ನೀಡಿದ್ದಾರೆ.
ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸರ್ಕಾರಿ ಅಧಿಕಾರಿಗಳಿಗಿಂತ ವೇಶ್ಯೆಯರು ಉತ್ತಮ. ವೇಶ್ಯೆಯರು ನಮ್ಮಿಂದ ಹಣ ಪಡೆದು ಕೆಲಸ ಮಾಡಿ ಮುಗಿಸುತ್ತಾರೆ. ಆದರೆ ಈ ಸರ್ಕಾರಿ ಅಧಿಕಾರಿಗಳು ನಮ್ಮಿಂದ ಹಣ ತೆಗೆದುಕೊಂಡ ನಂತರ ಕೆಲಸ ಪೂರ್ತಿಗೊಳಿಸುತ್ತಾರೆ ಎಂಬ ಯಾವ ನಿರೀಕ್ಷೆಯೂ ಇರಲ್ಲ ಎಂದಿದ್ದಾರೆ.
ಸುರೇಂದ್ರ ಸಿಂಗ್ ಈ ರೀತಿಯ ಹೇಳಿಕೆ ನೀಡಿದ್ದು ಇದೇ ಮೊದಲೇನೂ ಅಲ್ಲ. ಫೆಬ್ರುವರಿಯಲ್ಲಿ ರಾಟ್ಸಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಂಗ್, ‘ಭಾರತ್ ಮಾತಾ ಕಿ ಜೈ’, ‘ವಂದೇ ಮಾತರಂ’ ಎನ್ನದವರಿಗೆ ಈ ದೇಶದಲ್ಲಿ ವಾಸಿಸಲು ಯಾವುದೇ ಹಕ್ಕಿಲ್ಲ, ಇಂಥ ಜನರು ರಾಜಕೀಯ ಪ್ರವೇಶಿಸಲು ಅವಕಾಶ ನೀಡಬಾರದು ಎಂಬ ಹೇಳಿಕೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
BJP MLAಸರ್ಕಾರಿ ಅಧಿಕಾರಿಗಳುGovernment OfficialsSurendra SinghProstitutesಸುರೇಂದ್ರ ಸಿಂಗ್ವೇಶ್ಯೆಯರುಬಿಜಿಪಿ ಶಾಸಕ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


