ದೇಶ

'ಕಾಳಾ' ಚಿತ್ರ ಪ್ರದರ್ಶಿಸುವ ಚಿತ್ರಮಂದಿರಗಳಿಗೆ ಭದ್ರತೆ ನೀಡಿ; ಸಿಎಂಗೆ ನಟ ರಜನಿಕಾಂತ್ ಮನವಿ

ಕಾಳಾ ಚಿತ್ರ ಪ್ರದರ್ಶನ ಮಾಡುವ ಕರ್ನಾಟಕ ರಾಜ್ಯದ ಚಿತ್ರಮಂದಿರಗಳಿಗೆ ಭದ್ರತೆ ನೀಡುವಂತೆ ರಜನಿಕಾಂತ್ ಅವರು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಬುಧವಾರ ಮನವಿ ಮಾಡಿಕೊಂಡಿದ್ದಾರೆ...

'ಕಾಳಾ' ಚಿತ್ರ ಪ್ರದರ್ಶಿಸುವ ಚಿತ್ರಮಂದಿರಗಳಿಗೆ ಭದ್ರತೆ ನೀಡಿ; ಸಿಎಂಗೆ ನಟ ರಜನಿಕಾಂತ್ ಮನವಿ
ನಟ ರಜನಿಕಾಂತ್
Published On :
ಬೆಂಗಳೂರು; ಕಾಳಾ ಚಿತ್ರ ಪ್ರದರ್ಶನ ಮಾಡುವ ಕರ್ನಾಟಕ ರಾಜ್ಯದ ಚಿತ್ರಮಂದಿರಗಳಿಗೆ ಭದ್ರತೆ ನೀಡುವಂತೆ ನಟ ರಜನಿಕಾಂತ್ ಅವರು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಬುಧವಾರ ಮನವಿ ಮಾಡಿಕೊಂಡಿದ್ದಾರೆ. 
ಕಾಳಾ ಚಿತ್ರ ಜೂನ್.7 ರಂದು ಬಿಡುಗಡೆಗೊಳ್ಳುತ್ತಿದ್ದು, ಕಾವೇರಿ ವಿವಾದ ಸಂಬಂಧ ರಜನಿಕಾಂತ್ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸುತ್ತಿರುವ ಕನ್ನಡ ಪರ ಸಂಘಟನೆಗಳು ಚಿತ್ರ ಪ್ರದರ್ಶನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದವು. 
ಈ ಹಿನ್ನಲೆಯಲ್ಲಿ ಚಿತ್ರದ ನಿರ್ಮಾಣ ಸಂಸ್ಥೆಯಾದ ವೆಂಡರ್'ಬರ್ ಫಿಲಂ ಪ್ರೈವೇಟ್ ಲಿಮಿಟೆಡ್ ಹಾಗೂ ನಿರ್ಮಾಪಕರಾದ ನಟ ರಜನಿಕಾಂತ್ ಪುತ್ರಿ ಐಶ್ವರ್ಯ ಹಾಗೂ ಅಳಿಯ ಧನುಷ್ ಅವರು ಹೈಕೋರ್ಟ್'ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ರಾಜ್ಯದೆಲ್ಲೆಡೆ ಚಿತ್ರ ಬಿಡುಗಡೆಗೆ ಸೂಕ್ತ ಭದ್ರತೆ ನೀಡಲು ಸರ್ಕಾರ ಹಾಗೂ ರಾಜ್ಯ ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿದ್ದರು. 
ಈ ಅರ್ಜಿಯನ್ನು ನಿನ್ನೆ ವಿಚಾರಣೆ ನಡೆಸಿದ ನ್ಯಾಯಾಲಯ ರಾಜ್ಯದಲ್ಲಿ ಕಾಲಾ ಚಿತ್ರವನ್ನು ಪ್ರದರ್ಶಿಸುವ ಪ್ರದೇಶ ಮತ್ತು ಚಿತ್ರದ ಪ್ರದರ್ಶನಕ್ಕೆ ಅಡ್ಡಿಪಡಿಸಲಿರುವ ಸಂಘಟನೆಗಳ ವ್ಯಕ್ತಿಗಳ ಬಗ್ಗೆ ವಿವರ ಸಲ್ಲಿಸುವಂತೆ ಹಾಗೂ ಚಿತ್ರಪ್ರದರ್ಶನಕ್ಕೆ ಯಾವುದೇ ರೀತಿಯ ಅಡಚಣೆಗಳಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿತ್ತು. 
ಇದರ ಬೆನ್ನಲ್ಲೇ ಹೇಳಿಕೆ ನೀಡಿರುವ ರಜನಿಕಾಂತ್ ಅವರು, ಹೆಚ್.ಡಿ.ಕುಮಾರಸ್ವಾಮಿಯವರ ಪರಿಸ್ಥಿತಿಯನ್ನು ನಾನು ಅರ್ಥ ಮಾಡಿಕೊಳ್ಳುತ್ತೇನೆ. ಇದು ಕರ್ನಾಟಕಕ್ಕೆ ಒಳ್ಳೆಯದಲ್ಲ. ಇಡೀ ವಿಶ್ವದಾದ್ಯಂತ ಚಿತ್ರ ಬಿಡುಗಡೆಗೊಳ್ಳುತ್ತಿರುವಾಗ, ಕರ್ನಾಟಕದಲ್ಲಿ ಮಾತ್ರ ಚಿತ್ರಕ್ಕೆ ನಿಷೇಧ ಹೇರಿದರೆ, ವಿಚಾರ ದೊಡ್ಡ ಮಟ್ಟದ್ದಾಗುತ್ತದೆ ಎಂದು ಹೇಳಿದ್ದಾರೆ. 
ಇದರಂತೆ ರಾಜ್ಯ ಚಲನಚಿತ್ರ ಮಂಡಳಿಯ ಬಳಿಯೂ ಮನವಿ ಮಾಡಿಕೊಂಡಿರುವ ಅವರು, ಚಿತ್ರ ಬಿಡುಗಡೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ವಿತರಕರಿಗೆ ಯಾವುದೇ ರೀತಿಯ ಸಮಸ್ಯೆಯಾದಂತೆ ಮಂಡಳಿ ನೋಡಿಕೊಳ್ಳಬೇಕು. ಕಾಳಾ ಚಿತ್ರ ನಿಷೇಧಿಸುವಂತೆ ಮಂಡಳಿ ಆಗ್ರಹಿಸುತ್ತಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.