ದೇಶ

ಸಮರ್ಥನೆಗಾಗಿ ಸಂಪರ್ಕ ಪ್ರಚಾರ: ಮಾಧುರಿ , ಲತಾ ಮಂಗೇಶ್ಕರ್ ಭೇಟಿ ಮಾಡಿದ ಅಮಿತ್ ಶಾ

ಸಮರ್ಥನೆಗಾಗಿ ಸಂಪರ್ಕ ಪ್ರಚಾರಾಂದೋಲನದ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಂದು ಬಾಲಿವುಡ್ ನಟಿ ಮಾಧುರಿ ದೀಕ್ಷಿತ್, ಅವರ ಪತಿ ಡಾ. ಶ್ರೀರಾಮ್ ನೆನೆಯನ್ನು ಭೇಟಿ ಮಾಡಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಪಢ್ನವೀಸ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಮರ್ಥನೆಗಾಗಿ ಸಂಪರ್ಕ ಪ್ರಚಾರ: ಮಾಧುರಿ , ಲತಾ ಮಂಗೇಶ್ಕರ್ ಭೇಟಿ ಮಾಡಿದ ಅಮಿತ್ ಶಾ
ಅಮಿತ್ ಶಾ, ಮಾಧುರಿ ದೀಕ್ಷಿತ್, ಅವರ ಪತಿ ಡಾ. ಶ್ರೀರಾಮ್ ನೆನೆ, ಹಾಗೂ ಮಹಾರಾಷ್ಟ್ರ ಸಿಎಂ ದೇವೇಂದ್ರ ಪಡ್ನವೀಸ್
Published On :
ಮುಂಬೈ: ಸಮರ್ಥನೆಗಾಗಿ ಸಂಪರ್ಕ ಪ್ರಚಾರಾಂದೋಲನದ ಭಾಗವಾಗಿ  ಬಿಜೆಪಿ ರಾಷ್ಟ್ರೀಯ  ಅಧ್ಯಕ್ಷ ಅಮಿತ್ ಶಾ ಅವರಿಂದು   ಬಾಲಿವುಡ್ ನಟಿ ಮಾಧುರಿ ದೀಕ್ಷಿತ್,  ಅವರ ಪತಿ ಡಾ. ಶ್ರೀರಾಮ್ ನೆನೆಯನ್ನು ಭೇಟಿ ಮಾಡಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ  ಪಢ್ನವೀಸ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಳೆದ ನಾಲ್ಕು ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು  ಜನರಿಗೆ ತಲುಪಿಸುವ ನಿಟ್ಟಿನಲ್ಲಿ  ಸಮರ್ಥನೆಗಾಗಿ ಸಂಪರ್ಕ ಅಭಿಯಾನ ಆಯೋಜಿಸಲಾಗಿದ್ದು,  ಮೋದಿ ಸರ್ಕಾರ ಜನತೆಗೆ ನೀಡಿದ್ದ ಆಶ್ವಾಸನೆಗಳನ್ನ ಈಡೇರಿಸುವ ಬಗ್ಗೆ ಮಾಹಿತಿ ಇರುವ ಪುಸ್ತಕವನ್ನು  ಭೇಟಿಯಾದ ಗಣ್ಯರಿಗೆ ಅಮಿತ್ ಶಾ ನೀಡಿದರು.
ಈ ಮಧ್ಯೆ  ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಅವರನ್ನು ಭೇಟಿ ಮಾಡಿ 2019ರ ಲೋಕಸಭಾ ಚುನಾವಣೆ  ಹಿನ್ನೆಲೆಯಲ್ಲಿ ಬಿಜೆಪಿ- ಹಾಗೂ ಶಿವಸೇನಾ ನಡುವಿನ ಮೈತ್ರಿ ಸಂಬಂಧವೂ ಮಾತುಕತೆ ನಡೆಸಿದ್ದಾರೆ.
Story image

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.