ದೇಶ

ಮಾಧ್ಯಮಗಳು ದಲಿತ ಪದ ಬಳಸದಂತೆ ಸೂಚಿಸಿ: ಸರ್ಕಾರಕ್ಕೆ ಬಾಂಬೆ ಹೈಕೋರ್ಟ್‌ ಆದೇಶ

ಮಾಧ್ಯಮಗಳ ವರದಿಯಲ್ಲಿ 'ದಲಿತ' ಎಂಬ ಪದ ಬಳಸದಂತೆ ಸೂಚನೆ ನೀಡಬೇಕು ಎಂದು ಬಾಂಬೆ ಹೈಕೋರ್ಟ್ ನ ನಾಗ್ಪುರ...

ಮಾಧ್ಯಮಗಳು ದಲಿತ ಪದ ಬಳಸದಂತೆ ಸೂಚಿಸಿ: ಸರ್ಕಾರಕ್ಕೆ ಬಾಂಬೆ ಹೈಕೋರ್ಟ್‌ ಆದೇಶ
ಬಾಂಬೆ ಹೈಕೋರ್ಟ್
Published On :
ನಾಗ್ಪುರ: ಮಾಧ್ಯಮಗಳ ವರದಿಯಲ್ಲಿ 'ದಲಿತ' ಎಂಬ ಪದ ಬಳಸದಂತೆ ಸೂಚನೆ ನೀಡಬೇಕು ಎಂದು ಬಾಂಬೆ ಹೈಕೋರ್ಟ್ ನ ನಾಗ್ಪುರ ಪೀಠ ಗುರುವಾರ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಹಾಗೂ ಪ್ರೆಸ್‌ ಕೌನ್ಸಿಲ್‌ ಆಫ್‌ ಇಂಡಿಯಾಗೆ ಆದೇಶಿಸಿದೆ.
ಪತ್ರಿಕೆ ಹಾಗೂ ಟಿವಿ ಮಾಧ್ಯಮಗಳಲ್ಲಿ ದಲಿತ ಎಂಬ ಪದದ ಬದಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಎಂದು ಉಲ್ಲೇಖಿಸುವ ಬಗ್ಗೆ ಕೇಂದ್ರ ಸಮಾಜ ಕಲ್ಯಾಣ ಇಲಾಖೆ ಮಾರ್ಚ್ 15ರಂದು ಹೊರಡಿಸಿರುವ ಸುತ್ತೋಲೆಯನ್ನು ಜಾರಿಗೊಳಿಸುವಂತೆ ನ್ಯಾಯಮೂರ್ತಿಗಳಾದ ಭೂಷಣ್‌ ಧರ್ಮಾಧಿಕಾರಿ ಹಾಗೂ ಜಕ ಹಕ್‌ ಅವರಿದ್ದ ವಿಭಾಗೀಯ ಪೀಠ ಹೇಳಿದೆ.
ಕೇಂದ್ರ ಸರ್ಕಾರದ ಸುತ್ತೋಲೆಯ ಆಧಾರದ ಮೇರೆಗೆ ರಾಜ್ಯ ಸರ್ಕಾರ ನಾಲ್ಕು ವಾರಗೊಳಗಾಗಿ ಅಧಿಸೂಚನೆ ಹೊರಡಿಸಲಿದೆ ಎಂದು ಸರ್ಕಾರಿ ಅಭಿಯೋಜಕರು ಕೋರ್ಟ್‌ಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.