ಭಾರೀ ಮಳೆಗೆ ತುಂಬಿ ಹರಿಯುತ್ತಿರುವ ನದಿಗಳು: ಕರ್ನಾಟಕ ಸೇರಿ 5 ರಾಜ್ಯಗಳಿಗೆ ಪ್ರವಾಹದ ಎಚ್ಚರಿಕೆ
ಕರ್ನಾಟಕ ಕರಾವಳಿ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ಸೇರಿದಂತೆ 5 ರಾಜ್ಯಗಳಿಗೆ ಕೇಂದ್ರ ಸರ್ಕಾರ ಪ್ರವಾಹದ ಎಚ್ಚರಿಕೆ ನೀಡಿದೆ ಎಂದು ಗುರುವಾರ ತಿಳಿದುಬಂದಿದೆ...

Published On :
ನವದೆಹಲಿ: ಕರ್ನಾಟಕ ಕರಾವಳಿ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ಸೇರಿದಂತೆ 5 ರಾಜ್ಯಗಳಿಗೆ ಕೇಂದ್ರ ಸರ್ಕಾರ ಪ್ರವಾಹದ ಎಚ್ಚರಿಕೆ ನೀಡಿದೆ ಎಂದು ಗುರುವಾರ ತಿಳಿದುಬಂದಿದೆ.
ಕೇರಳ, ಕರ್ನಾಟಕ, ಮಹಾರಾಷ್ಟ್ರ, ಗೋವಾ ಮತ್ತು ಗುಜರಾತ್ ರಾಜ್ಯಗಳಿಗೆ ಕೇಂದ್ರ ಸರ್ಕಾರ ಪ್ರವಾಹ ಎಚ್ಚರಿಕೆ ನೀಡಿದೆ ಎಂದು ವರದಿಗಳು ತಿಳಿಸಿವೆ.
ಕರ್ನಾಟಕದ ಕರಾವಳಿ ಮತ್ತು ಕೊಂಕಣ ಗೋವಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಕೊಂಕಣ, ಗೋವಾ ಮತ್ತು ಮಹಾರಾಷ್ಟ್ರದ ಕೇಂದ್ರೀಯ ಪ್ರದೇಶಗಳಲ್ಲಿ ಜೂನ್7-12ರಂದು ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಜನಸಂಪನ್ಮೂಲ ಸಚಿವಾಲಯಕ್ಕೆ ಎಚ್ಚರಿಕೆಗಳನ್ನು ನೀಡಿದೆ.
ಕರ್ನಾಟಕ ರಾಜ್ಯದಾದ್ಯಂತ ಜೂನ್.9 ಮತ್ತು ಜೂನ್11, ಕೇರಳ ರಾಜ್ಯದಲ್ಲಿ ಜೂನ್9 ಮತ್ತು 10ರಂದು ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದೆ.
ಪುಣೆ ಜಿಲ್ಲೆಯ ಕೆಲವು ಭಾಗಗಳಲ್ಲಿ ವರುಣ ತೀವ್ರವಾಗಿ ಆರ್ಭಟಿಸಲಿದ್ದಾರೆ. ಭಾರೀ ಮಳೆಯಿಂದಾಗಿ ಕರಾವಳಿ, ಕೊಂಕಣ ಗೋವಾ ಮತ್ತು ಮುಂಬೈಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆಗಳಿವೆ.
ದಕ್ಷಿಣ ನೈರುತ್ ಮಾರುತವು ಕರ್ನಾಟಕ ದಕ್ಷಿಣ ಒಳನಾಡಿನ ಇನ್ನಷ್ಟು ಭಾಗಗಳು, ರಾಯಲಸೀಮೆಯ ಬಹುತೇಕ ಭಾಗ, ಆಂಧ್ರಪ್ರದೇಶ ದಕ್ಷಿಣ ಕರಾವಣಿ ಮತ್ತು ಬಂಗಾಳ ಕೊಲ್ಲಿಯ ಕೇಂದ್ರ ಪಶ್ಚಿಮ ಭಾಗಗಳು, ಬಂಗಾಳಕೊಲ್ಲಿಯ ಕೇಂದ್ರ ಪೂರ್ವದ ಉಳಿದ ಪ್ರದೇಶಗಳು ಹಾಗೂ ಈಶಾನ್ಯದ ಇನ್ನಷ್ಟು ಭಾಗಗಳಲ್ಲಿ ಬಲಗೊಳ್ಳಲಿದೆ ಎಂದು ಹವಾಮಾನ ಇಲಾಖೆ ವಿವರಿಸಿದೆ.
ಕೇಂದ್ರ ಅರೇಬಿಯನ್ ಸಮುದ್ರ, ದಕ್ಷಿಣ ಕೊಂಕಣ ಮತ್ತು ಗೋವಾದ ಮತ್ತಷ್ಟು ಭಾಗಗಳಲ್ಲಿ ಕರ್ನಾಟಕ ಮತ್ತು ರಾಯಲಸೀಮೆಯ ಉಳಿದ ಭಾಗಗಳಲ್ಲಿ, ತೆಲಂಗಾಣದ ಕೆಲವು ಭಾಗಗಳಲ್ಲಿ, ಆಂಧ್ರ ಕರಾವಳಿ ಹಾಗೂ ಬಂಗಾಳ ಕೊಲ್ಲಿಯ ಪಶ್ಚಿಮ ಕೇಂದ್ರದ ಮತ್ತಷ್ಟು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ನೈರುತ್ಯ ಮಾರುತಗಳು ಬಲಗೊಳ್ಳುವ ಪರಿಸ್ಥಿತಿ ಪೂರಕವಾಗಿದೆ.
ಮಹಾರಾಷ್ಟ್ರ, ತೆಲಂಗಾಣ ಮತ್ತು ಆಂಧ್ರಪ್ರದೇಶ ಕರಾವಳಿಯ ಮತ್ತಷ್ಟು ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ನೈರುತ್ಯ ಮಾರುತಗಳು ಮಳೆಗೆ ಪೂರಕವಾಗುವ ನಿಟ್ಟಿನಲ್ಲಿ ಪ್ರಬಲವಾಗಲಿವೆ.
ದೇಶದ ಹಲವೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ರಾಜ್ಯ ವಿಪತ್ತು ಪರಿಹಾರ ಘಟವು ಹಲವೆಡೆ ಹೈ ಅಲರ್ಟ್ ಘೋಷಣೆ ಮಾಡಿದೆ. ಯಾವುದೇ ರೀತಿಯ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಸಿದ್ಧವಾಗಿರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಕರ್ನಾಟಕ, ಮಹಾರಾಷ್ಟ್ರ, ಕೇರಳ, ಗೋವಾ ಮತ್ತು ಗುಜರಾತ್ ರಾಜ್ಯಗಳ ಪ್ರಮುಖ ನದಿಗಳಾದ ತಾಪಿ, ತದ್ರಿ, ಕೃಷ್ಣಾ, ಕಾವೇರಿ ಸೇರಿದಂತೆ ಬಹುತೇಕ ನದಿಗಳ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆಗಳಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆಗಳಿದ್ದು, ಮುನ್ನಚ್ಚರಿಕೆ ವಹಿಸುವಂತೆ ಕೇಂದ್ರ ಹವಾಮಾನ ಇಲಾಖೆ ಸೂಚನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


