ದೇಶ

ಮಧ್ಯಪ್ರದೇಶ ಚುನಾವಣೆಯಲ್ಲಿ ಗೆದ್ದು ರೈತರ ಸಾವಿಗೆ ಸೇಡು ತೀರಿಸಿಕೊಳ್ಳುತ್ತೇವೆ; ಕಾಂಗ್ರೆಸ್

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೆಲವು ಸಾಧಿಸಿ ರೈತರ ಸಾವಿಗೆ ಸೇಡು ತೀರಿಸಿಕೊಳ್ಳುತ್ತೇವೆಂದು ಕಾಂಗ್ರೆಸ್ ಬುಧವಾರ ಹೇಳಿದೆ...

ಮಧ್ಯಪ್ರದೇಶ ಚುನಾವಣೆಯಲ್ಲಿ ಗೆದ್ದು ರೈತರ ಸಾವಿಗೆ ಸೇಡು ತೀರಿಸಿಕೊಳ್ಳುತ್ತೇವೆ; ಕಾಂಗ್ರೆಸ್
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ
Published On :
ಮಂಡಸೌರ್: ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೆಲವು ಸಾಧಿಸಿ ರೈತರ ಸಾವಿಗೆ ಸೇಡು ತೀರಿಸಿಕೊಳ್ಳುತ್ತೇವೆಂದು ಕಾಂಗ್ರೆಸ್ ಬುಧವಾರ ಹೇಳಿದೆ. 
ಕಿಸಾನ್ ಸಮೃದ್ಧಿ ಸಂಕಲ್ಪ್ ರ್ಯಾಲಿಯಲ್ಲಿ ಮಾತನಾಡಿರುವ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸ್ಕಿಂಡಿಯಾ ಅವರು, ಕಳೆದ ವರ್ಧ ಮಂಡಸೌರ್ ನಲ್ಲಿ ನಡೆದ ಪ್ರತಿಭಟಡನೆ ವೇಳೆ ರೈತರು ಮೃತಪಟ್ಟಿದ್ದರು. ಈ ಬಾರಿಯ ಚುನಾವಣೆಯಲ್ಲಿ ಗೆಲವು ಸಾಧಿಸುವ ಮೂಲಕ ರೈತರ ಸಾವಿಗೆ ಸೇಡು ತೀರಿಸಿಕೊಳ್ಳುತ್ತೇವೆ. 
ಬಳಿಕ ರ್ಯಾಲಿಯಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಒಂದು ಕಡೆ ಮೇಕ್ ಇನ್ ಇಂಡಿಯಾಗೆ ಕರೆ ನೀಡುತ್ತಿದ್ದರೆ, ಮತ್ತೊಂದೆಡೆ ಮೇಡ್ ಇನ್ ಚೀನಾ ಪೋನ್ ಬಳಕೆ ಮಾಡುತ್ತಿದ್ದಾರೆಂದು ಆರೋಪ ಮಾಡಿದ್ದಾರೆ. 
ಮೋದಿ ಅಧಿಕಾರಕ್ಕೆ ಬಂದ ಬಳಿಕ ರೈತರಿಗೆ ಏನು ಮಾಡಿದರು? ಮೇಕ್ ಇನ್ ಇಂಡಿಯಾ ಗತಿ ಏನಾಯಿತು? ಮೋದಿಯವರ ಫೋನನ್ನೇ ನೋಡಿ...ಅದು ಮೇಡ್ ಇನ್ ಚೀನಾ' ಎಂದು ವ್ಯಂಗ್ಯವಾಡಿದರು. 
ಕಾಂಗ್ರೆಸ್'ಗೆ ಅಧಿಕಾರ ಕೊಡಿ. ಇನ್ನು 5 ಅಥವಾ 7 ವರ್ಷ ಬಿಟ್ಟು ಬರುವೆ. ಆಗ ಮೇಡ್ ಇನ್ ಮಂಡಸೌರ್ ಉತ್ಪನ್ನಗಳು ಉತ್ಪಾದನೆ ಆಗುತ್ತಿರುತ್ತವೆ ಎಂಬ ದೊಡ್ಡ ಭರವಸೆಯನ್ನು ರಾಹುಲ್ ನೀಡಿದರು. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ 10 ದಿನಗಳಲ್ಲಿ ಕೃಷಿ ಸಾಲ ಮನ್ನಾ ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದ್ದಾರೆ. 
ರಾಜ್ಯದ ಮಂಡಸೌರ್ ನಲ್ಲಿ ಕಳೆದ ಜೂನ್ 6 ರಂದು ನಡೆದ ರೈತ ಪ್ರತಿಭಟನೆ ವೇಳೆ ಗೋಲಿಬಾರ್ ಸಂಭವಿಸಿ 6 ರೈತರು ಸಾವನ್ನಪ್ಪಿದ್ದರು. ಇದರ ಮೊದಲ ವರ್ಷಾಚರಣೆ ನಿಮಿತ್ತ ಮಂಡಸೌರ್'ನಲ್ಲಿ ಬೃಹತ್ ರ್ಯಾಲಿ ಆಯೋಜಿಸಲಾಗಿತ್ತು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.