ಪ್ರಣಬ್ ಮುಖರ್ಜಿ ಭಾಷಣ ಕುರಿತು ಪಿ.ಚಿದಂಬರಂ ಮೆಚ್ಚುಗೆ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಡಿದ ಮಾತುಗಳು ಛಾಟಿ ಏಟು ನೀಡಿದಂತಿತ್ತು ಎಂದು ಮಾಜಿ ಕೇಂದ್ರ ವಿತ್ತ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಪಿ.ಚಿದಂಬಂರಂ ಹೇಳಿದ್ದಾರೆ.

Published On :
ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಡಿದ ಮಾತುಗಳು ಛಾಟಿ ಏಟು ನೀಡಿದಂತಿತ್ತು ಎಂದು ಮಾಜಿ ಕೇಂದ್ರ ವಿತ್ತ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಪಿ.ಚಿದಂಬಂರಂ ಹೇಳಿದ್ದಾರೆ.
ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ ಅವರು ಪಾಲ್ಗೊಂಡು ನೀಡಿದ್ದ ಭಾಷಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, 'ಕಾಂಗ್ರೆಸ್ ಪಕ್ಷದ ಸಿದ್ಧಾಂತದಲ್ಲಿರುವ ಉತ್ತಮ ಅಂಶಗಳನ್ನು ಎತ್ತಿಹಿಡಿಯುವ ಮೂಲಕ, ಆರ್ ಎಸ್ ಎಸ್ಸಿದ್ಧಾಂತದಲ್ಲಿರುವ ದೋಷಗಳನ್ನೂ ಪ್ರಣಬ್ ಮುಖರ್ಜಿ ತೋರಿಸಿಕೊಟ್ಟಿದ್ದಾರೆ. ಆರ್ ಎಸ್ ಎಸ್ಸಿದ್ಧಾಂತದಲ್ಲಿ ದೋಷವಿದೆ ಎಂಬುದನ್ನು ತಿಳಿಸುವುದಕ್ಕೆ ಅವರಾಡಿದ ವಿಭಿನ್ನ ಶೈಲಿ ಮಾತುಗಳನ್ನು ಕಂಡು ಸಂತಸವಾಯಿತು" ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.
ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಆರ್ ಎಸ್ ಎಸ್ಕೇಂದ್ರ ಕಚೇರಿಯಲ್ಲಿ ನಡೆದ ಮೂರನೇ ವರ್ಷದ ಶಿಕ್ಷಾ ವರ್ಗ್ ನಲ್ಲಿ ಮಾಜಿ ರಾಷ್ಟ್ರಪತಿ, ಕಾಂಗ್ರೆಸ್ ನಾಯಕ ಪ್ರಣಬ್ ಮುಖರ್ಜಿ ಭಾಗವಹಿಸಿದ್ದರು. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನೆಲ್ಲ ಬದಿಗಿಟ್ಟು ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಣಬ್ ನಡೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಅತ್ತ ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಹೋಗುವ ಪ್ರಣಬ್ ನಿರ್ಧಾರಕ್ಕೆ ಎಲ್ಲಡೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತಾದರೂ, ಚಿದಂಬರಂ ಮಾತ್ರ ಅವರಿಗೆ ಬೆಂಬಲ ನೀಡಿದ್ದರು. ಅಲ್ಲದೆ ಆರ್ ಎಸ್ ಎಸ್ ಅವರಿಗೆ ಅವರ ತಪ್ಪೇನು ಎಂದು ತಿಳಿಸಿ ಎಂದು ಟ್ವೀಟ್ ಮಾಡುವ ಮೂಲಕ ಹೇಳಿದ್ದರು.
ಕಾಂಗ್ರೆಸ್ಸಿಗರ ವಿರೋಧದ ನಡುವೆಯೂ ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಭಾಗವಹಿಸಿದ್ದ ಪ್ರಣಬ್ ಮುಖರ್ಜಿ ಸಂಘದ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೆವಾರ್ ಅವರನ್ನು ಭಾರತ ಮಾತೆಯ ಹೆಮ್ಮೆಯ ಪುತ್ರ ಎಂದು ಕರೆದಿದ್ದರು. ಅಂತೆಯೇ ವಿವಿಧತೆಯಲ್ಲಿ ಏಕತೆ ನಮ್ಮ ದೊಡ್ಡ ಶಕ್ತಿ ಎಂದು ಭಾರತವನ್ನು ಹಾಡಿ ಹೊಗಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


