ದೇಶ

ಜೂ.13ಕ್ಕೆ ರಾಹುಲ್ ಗಾಂಧಿ ಇಫ್ತಾರ್ ಕೂಟ, ಪ್ರತಿಪಕ್ಷಗಳ ನಾಯಕರು ಭಾಗಿ

ಎಐಸಿಸಿ ಎರಡು ವರ್ಷಗಳ ನಂತರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಜೂನ್ 13ರಂದು ಇಫ್ತಾರ್ ಕೂಟ....

ಜೂ.13ಕ್ಕೆ ರಾಹುಲ್ ಗಾಂಧಿ ಇಫ್ತಾರ್ ಕೂಟ, ಪ್ರತಿಪಕ್ಷಗಳ ನಾಯಕರು ಭಾಗಿ
ರಾಹುಲ್ ಗಾಂಧಿ
Published On :
ನವದೆಹಲಿ: ಎಐಸಿಸಿ ಎರಡು ವರ್ಷಗಳ ನಂತರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಜೂನ್ 13ರಂದು ಇಫ್ತಾರ್ ಕೂಟ ಏರ್ಪಡಿಸಿದ್ದು, ಪ್ರತಿಪಕ್ಷಗಳ ನಾಯಕರು ಭಾಗಿಯಾಗುವ ಸಾಧ್ಯತೆ ಇದೆ.
ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ನೇಮಕಗೊಂಡ ನಂತರ ಆಯೋಜಿಸಿದ ಮೊದಲ ಇಫ್ತಾರ್ ಕೂಟ ಇದಾಗಿದ್ದು, ಜೂನ್ 13ರಂದು ದೆಹಲಿಯ ತಾಜ್ ಪ್ಯಾಲೆಸ್ ಹೋಟೆಲ್ ನಲ್ಲಿ ಇಫ್ತಾರ್ ಕೂಟ ಏರ್ಪಾಡು ಮಾಡಲಾಗಿದೆ ಎಂದು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ನದೀಮ್ ಜಾವೇದ್ ಅವರು ತಿಳಿಸಿದ್ದಾರೆ.
ಪ್ರತಿಪಕ್ಷಗಳ ನಾಯಕರು ಸೇರಿದಂತೆ ಕಾಂಗ್ರೆಸ್ ನ ಎಲ್ಲಾ ನಾಯಕರುಗಳನ್ನು ಹಾಗೂ ಕೆಲವು ಹಿರಿಯ ಅಧಿಕಾರಿಗಳನ್ನು ಇಫ್ತಾರ್ ಕೂಟಕ್ಕೆ ಆಹ್ವಾನಿಸಲಾಗಿದೆ.
ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು 2015ರಲ್ಲಿ ಇಫ್ತಾರ್ ಕೂಟವನ್ನು ಏರ್ಪಾಡು ಮಾಡಿದ್ದರು.
2016ಕ್ಕಿಂತ ಮುಂಚೆ ಕಾಂಗ್ರೆಸ್ ಇಫ್ತಾರ್ ಕೂಟವನ್ನು ಏರ್ಪಾಡು ಮಾಡುತ್ತಿತ್ತು. ಅಧಿಕಾರದಲ್ಲಿದ್ದಾಗ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಏರ್ಪಾಡು ಮಾಡುತ್ತಿದ್ದರು. ವಿರೋಧ ಪಕ್ಷದಲ್ಲಿದ್ದಾಗ ಸೋನಿಯಾ ಗಾಂಧಿಯವರು ಏರ್ಪಾಡು ಮಾಡಿದ್ದರು.
2016ರಲ್ಲಿ ಇಫ್ತಾರ್ ಕೂಟವನ್ನು ಆಯೋಜನೆ ಮಾಡುವುದಿಲ್ಲ ಅದರ ಬದಲು ಬಡವರಿಗೆ ರೇಷನ್ ಕೊಡುತ್ತೇವೆ ಎಂದು ಸೋನಿಯಾ ಗಾಂಧಿ ಹೇಳಿದ್ದರು. ಈ ಹಿಂದೆಯೂ ಕೆಲವು ಬಾರಿ ದೇಶದಲ್ಲಿ ಬರ ಅಥವಾ ನೈಸರ್ಗಿಕ ವಿಕೋಪ ಸಂಭವಿಸಿದಾಗ ಕಾಂಗ್ರೆಸ್ ಇಫ್ತಾರ್ ಕೂಟ ಆಯೋಜನೆ ಮಾಡಿರಲಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.