ದೇಶ

ಕರ್ನಾಟಕದ ಧರ್ಮಸ್ಥಳ ನೋಡಿ ಕಲೀರಿ; ಪುರಿ ದೇಗುಲ ಆಡಳಿತ ಮಂಡಳಿಗೆ 'ಸುಪ್ರೀಂ' ತರಾಟೆ

ದೇವಸ್ಥಾನ ನಿರ್ವಹಣೆ ವಿಚಾರದಲ್ಲಿ ಕರ್ನಾಟಕದ ಧರ್ಮಸ್ಥಳದ ಆಡಳಿತ ನೋಡಿ ಕಲಿಯಿರಿ ಎಂದು ಒಡಿಶಾದ ಪುರಿ ಜನನ್ನಾಥ ದೇಗುಲ ಆಡಳಿತ ಮಂಡಳಿಯನ್ನು ಸುಪ್ರೀಂಕೋರ್ಟ್ ಶನಿವಾರ ತರಾಟೆಗೆ ತೆಗೆದುಕೊಂಡಿದೆ...

ಕರ್ನಾಟಕದ ಧರ್ಮಸ್ಥಳ ನೋಡಿ ಕಲೀರಿ; ಪುರಿ ದೇಗುಲ ಆಡಳಿತ ಮಂಡಳಿಗೆ 'ಸುಪ್ರೀಂ' ತರಾಟೆ
ಸಂಗ್ರಹ ಚಿತ್ರ
Published On :
ನವದೆಹಲಿ; ದೇವಸ್ಥಾನ ನಿರ್ವಹಣೆ ವಿಚಾರದಲ್ಲಿ ಕರ್ನಾಟಕದ ಧರ್ಮಸ್ಥಳದ ಆಡಳಿತ ನೋಡಿ ಕಲಿಯಿರಿ ಎಂದು ಒಡಿಶಾದ ಪುರಿ ಜನನ್ನಾಥ ದೇಗುಲ ಆಡಳಿತ ಮಂಡಳಿಯನ್ನು ಸುಪ್ರೀಂಕೋರ್ಟ್ ಶನಿವಾರ ತರಾಟೆಗೆ ತೆಗೆದುಕೊಂಡಿದೆ. 
ದೇವಾಲಯದಲ್ಲಿ ಭಕ್ತರ ಶೋಷಣೆಯನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾ.ಆದರ್ಶ ಗೋಯಲ್ ಮತ್ತು ನ್ಯಾ.ಆಸೋಕ್ ಭೂಷಣ್ ಅವರಿದ್ದ ಪೀಠ ದೇಗುಲ ನಿರ್ವಹಣೆಗೆ ಸಂಬಂಧಿಸಿದಂತೆ ಪುರಿ ಜಗನ್ನಾಥ ದೇಗುಲ ಆಡಳಿತ ಮಂಡಳಿಗೆ ಹಲವು ನಿರ್ದೇಶನಗಳನ್ನು ನೀಡಿದೆ. 
ಕರ್ನಾಟಕದ ಧರ್ಮಸ್ಥಳ ದೇವಸ್ಥಾನ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ವೈಷ್ಣೇ ದೇವಿ, ಆಂಧ್ರಪ್ರದೇಶದ ತಿರುಪತಿ ದೇವಸ್ಥಾನದ ನಿರ್ವಹಣೆ ವ್ಯವಸ್ಥೆಯನ್ನು ಅಧ್ಯಯನ ನಡೆಸುವಂತೆ ಒಡಿಶಾ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ. 
ಮುಂದಿನ ತಿಂಗಳು ನಡೆಯಲಿರುವ ವಾರ್ಷಿಕ ರಥಯಾತ್ರೆಗೂ ಮುನ್ನಾ ನ್ಯಾಯಾಲಯ ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ಈ ಆದೇಶ ಮಹತ್ವವನ್ನು ಪಡೆದಿದೆ. 
ಪುರಿ ಜಗನ್ನಾಥ ದೇವಸ್ಥಾನದ ಸಿಬ್ಬಂದಿಯಿಂದ ಭಕ್ತರ ಶೋಷಣೆ ನಡೆಯುತ್ತಿರುವುದರ ಬಗ್ಗೆ ಗಮನ ಸೆಳೆದ ಮೃನಾಲಿನಿ ಎಂಬುವವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯ ತೀರ್ಪು ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.